Webdunia - Bharat's app for daily news and videos

Install App

ಕುಖ್ಯಾತ ಮನೆಗಳ್ಳರ ಬಂಧನ: ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶ

Webdunia
ಶುಕ್ರವಾರ, 11 ಜನವರಿ 2019 (14:11 IST)
ಮನೆಗಳಿಗೆ ಕನ್ನ ಹಾಕಿ ಚಿನ್ನಾಭರಣ ದೋಚುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿ, ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.
ಬಾಗಲಗುಂಟೆ ಗ್ರಾಮದ ಸಂತೋಷ್ ಹಾಗೂ ಆಂಧ್ರ ಮೂಲದ ವೆಂಕಟೇಶ್  ಬಂಧಿತ ಆರೋಪಿಗಳಾಗಿದ್ದಾರೆ.

 ಕಳವು ಪ್ರಕರಣ ಪತ್ತೆಗೆ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಪ್ರಕಾಶ್ಗೌಡ, ಅಧೀಕ್ಷಕಿ ನಂದಿನಿ ಹಾಗೂ ಅರಸೀಕೆರೆ ಉಪ ವಿಭಾಗದ ಡಿವೈಎಸ್ಪಿ ಸದಾನಂದ ತಿಪ್ಪಣ್ಣನವರ ಮಾರ್ಗದರ್ಶನದಲ್ಲಿ ನಗರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕರಾದ ರಂಗಸ್ವಾಮಿ ನೇತೃತ್ವದಲ್ಲಿ ಆರೋಪಿಗಳ ಪತ್ತೆ ಕಾರ್ಯಕ್ಕೆ ತಂಡವನ್ನು ರಚಿಸಲಾಗಿತ್ತು.

ಆರೋಪಿಗಳನ್ನು ಬಂಧಿಸಿದ ಪೊಲೀಸರು ಅವರು ನೀಡಿದ ಮಾಹಿತಿ ಮೇರೆಗೆ ಬೆಂಗಳೂರು ಮತ್ತು ಪಿರಿಯಾಪಟ್ಟಣಕ್ಕೆ ತೆರಳಿ 135 ಗ್ರಾಂ ತೂಕದ 3 ಲಕ್ಷದ 65 ಸಾವಿರ ರೂ. ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

2018ರಲ್ಲಿ ನಡೆದಿದ್ದ ಮತ್ತೊಂದು ಪ್ರಕರಣದಲ್ಲಿ ಮೈಸೂರು ನಗರದಲ್ಲಿ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದ ಅಮೀರ್ ಜಾನ್ ಎಂಬುವನನ್ನು ನಗರ ಠಾಣೆ ಪೊಲೀಸರು ಬಂಧಿಸಿದ್ದು, ವಿಚಾರಣೆ ವೇಳೆಯಲ್ಲಿ ಆತನು ನೀಡಿದ ಮಾಹಿತಿ ಮೇರೆಗೆ ಆಂಧ್ರ ಪ್ರದೇಶದ ಪೆನುಗೊಂಡ ಎಂಬ ಸ್ಥಳಕ್ಕೆ ಪೊಲೀಸರು ತೆರಳಿ ಸುಮಾರು 68 ಗ್ರಾಂ ತೂಕದ 1 ಲಕ್ಷದ 83 ಸಾವಿರ ರೂ. ಬೆಲೆಯ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments