Webdunia - Bharat's app for daily news and videos

Install App

ಕಾಮುಕನ ಬಂಧನ: 47 ಲಕ್ಷ ಮೌಲ್ಯದ ವಸ್ತು ವಶ

Webdunia
ಬುಧವಾರ, 19 ಡಿಸೆಂಬರ್ 2018 (17:36 IST)
ಮನೆಕಳ್ಳತನ ಮಾಡುತ್ತಿದ್ದ ಕಾಮುಕನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಮನೆಗಳವು, ಸರಗಳವು, ವಾಹನ ಕಳವು ಮಾಡುತ್ತಿದ್ದ ಐವರು ಆರೋಪಿಗಳನ್ನು ಬಂಧಿಸಿರುವ ರಾಮಮೂರ್ತಿ ನಗರ ಪೊಲೀಸರು 47 ಲಕ್ಷ 64 ಸಾವಿರ ಮೌಲ್ಯದ ಚಿನ್ನ-ಬೆಳ್ಳಿ ಆಭರಣಗಳು, ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಸಫಲರಾಗಿದ್ದಾರೆ.

ಮನೆಗಳವು ಮಾಡುತ್ತಿದ್ದ ಷಣ್ಮುಗ ಅಲಿಯಾಸ್ ಕಾಮುಕ(42)ನನ್ನು ಬಂಧಿಸಿ 7 ಮನೆಗಳವು ಪ್ರಕರಣಗಳನ್ನು ಪತ್ತೆಹಚ್ಚಿ 10 ಲಕ್ಷ 8 ಸಾವಿರ ಮೌಲ್ಯದ 336 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.  ಮತ್ತೊಬ್ಬ ಕನ್ನಗಳ್ಳ ಜ್ಞಾನಪ್ರಕಾಶ್ ಅಲಿಯಾಸ್ ಅಜ್ಜು (40)ನನ್ನು ಬಂಧಿಸಿ 16 ಕನ್ನಗಳವು ಪ್ರಕರಣಗಳಿಗೆ ಸಂಬಂಧಿಸಿದ 32 ಲಕ್ಷ 61 ಸಾವಿರ ಮೌಲ್ಯದ 1 ಕೆಜಿ 87 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ವಾಹನಗಳವು ಮಾಡುತ್ತಿದ್ದ ಪಣೀಶ್ ಅಲಿಯಾಸ್ ಐವಾರ (23)ನನ್ನು ಬಂಧಿಸಿ 3 ದ್ವಿಚಕ್ರ ವಾಹನಗಳ ಕಳವು ಪ್ರಕರಣಗಳನ್ನು ಪತ್ತೆ ಹಚ್ಚಿ 3 ಲಕ್ಷ 60 ಸಾವಿರ ಮೌಲ್ಯದ ಮಾಲುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಸರಗಳ್ಳತನ ಮಾಡುತ್ತಿದ್ದ ರೂಬನ್ ಅಲಿಯಾಸ್ ಪ್ಯಾಮ್ (22) ಎಂಬಾತನನ್ನು ಬಂಧಿಸಿ 1 ಲಕ್ಷ 35 ಸಾವಿರ ಮೌಲ್ಯದ 40 ಗ್ರಾಂ ತೂಕದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments