Select Your Language

Notifications

webdunia
webdunia
webdunia
webdunia

ಸಾಲ ಕೊಟ್ಟವಳನ್ನೇ ಕೊಂದಿದ್ದ ಭೂಪ ಅಂದರ್

webdunia
ಶುಕ್ರವಾರ, 15 ಫೆಬ್ರವರಿ 2019 (16:19 IST)
ಸಾಲ ಕೊಟ್ಟ ಹಣವನ್ನು ವಾಪಸ್ ಕೇಳಿದ ಮಹಿಳೆಗೆ ಹಣ ಕೊಡುವುದಾಗಿ ನಂಬಿಸಿ ಕಾರಿನಲ್ಲಿ ಕರೆದೊಯ್ದ ಕೊಲೆ ಮಾಡಿದ್ದ ಆರೋಪಿಯನ್ನು ಬಂಧನ ಮಾಡಲಾಗಿದೆ.

ಮಹಿಳೆಯ ಮೃತದೇಹವನ್ನು ಪೆಟ್ರೋಲ್ ಸುರಿದು ಬೆಂಕಿಹಚ್ಚಿ ಗುರುತು ಸಿಗದಂತೆ ಮಾಡಿದ್ದ ಆರೋಪಿಗಳನ್ನು ಗೌರಿಬಿದನೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ನೆಲಮಂಗಲದ ತಾವರೆಕೆರೆಯ ಶಾಂತಮ್ಮ ಅವರನ್ನು ಕೊಲೆ ಮಾಡಿ ಬಳಿಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ ದೊಡ್ಡಬಳ್ಳಾಪುರದ ಕಾಡತಿಪ್ಪೂರುವಿನ ರಾಮಾಂಜಿನಪ್ಪ ಮತ್ತು ನರಸಿಂಹಮೂರ್ತಿಯನ್ನು ಬಂಧಿಸಿ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಕಳೆದ .21ರಂದು ಗೌರಿಬಿದನೂರಿನ ಸೋಮಶೆಟ್ಟಿಹಳ್ಳಿ ಬಳಿ ನರಸಿಂಹಯ್ಯ ಎಂಬವರ ಜಮೀನಿನಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಗೌರಿಬಿದನೂರು ಪೊಲೀಸರಿಗೆ ಮೃತಳ ಮಗ ಹಾಗೂ ಮಗಳು ಮೃತದೇಹವನ್ನು ಕಂಡು ಇದು ತನ್ನ ತಾಯಿ ಶಾಂತಮ್ಮಳದ್ದೇ ಎಂದು ಪತ್ತೆ ಹಚ್ಚಿದರು.

ಹೀಗಾಗಿ ಶಾಂತಮ್ಮಳ ಕೊಲೆ ಪ್ರಕರಣದ ತನಿಖೆಗೆ ಮುಂದಾದ ಪೊಲೀಸರು ಮೊಬೈಲ್ ಕರೆಗಳನ್ನು ಆಧರಿಸಿ ರಾಮಾಂಜಿನಪ್ಪನನ್ನು ಬಂಧಿಸಿದ್ದಾರೆ.ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಜೂಜು ಅಡ್ಡೆ ಮೇಲೆ; ಸೆರೆ ಸಿಕ್ಕವರು ಎಷ್ಟು ಜನ ಗೊತ್ತಾ?