ಬೆಂಗಳೂರು : ಕೇಂದ್ರ ಸರಕಾರದ ಸರ್ವೆ ಇಲಾಖೆಯಲ್ಲಿ ಉನ್ನತ ಅಧಿಕಾರಿ ಎಂದು ನಂಬಿಸಿ ಸರಕಾರಿ ಕೆಲಸ ಕೊಡಿಸುವುದಾಗಿ 15ಕ್ಕೂ ಹೆಚ್ಚು ಜನರಿಂದ 1.3 ಕೋಟಿ ರೂ. ಪಡೆದು ವಂಚಿಸಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಬಸ್ರೂರು ಮೂಲದ ಜೆಪಿ ನಗರದ ನಿವಾಸಿ ರಾಘವ ಅಲಿಯಾಸ್ ರಾಘವೇಂದ್ರ (39) ಬಂಧಿತ. ಆರೋಪಿಯಿಂದ 1 ದ್ವಿಚಕ್ರ ವಾಹನ, ಮೊಬೈಲ್, ಟ್ಯಾಬ್ಸ್, ಲ್ಯಾಪ್ಟಾಪ್ಗಳು, ಚೆಕ್ಗಳು, ಬಾಂಡ್ ಪೇಪರ್ಗಳು, ಆತ ಖರೀದಿಸಿದ್ದ ಆಸ್ತಿಯ ದಾಖಲಾತಿಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದರು.