ತುಮಕೂರು : ಕಿಸಾನ್ ಸಮ್ಮಾನ್ ಯೋಜನೆಯ ಲೋಕಾರ್ಪಣೆ ಕಾರ್ಯಕ್ರಮದ ಹಿನ್ನಲೆ ಜನವರಿ 2 ರಂದು ಪ್ರಧಾನಿ ನರೇಂದ್ರ ಮೋದಿ ಅವರು ತುಮಕೂರಿಗೆ ಆಗಮಿಸಲಿದ್ದಾರೆ.
									
										
								
																	
ತುಮಕೂರು ನಗರದ ಸರ್ಕಾರಿ ಜೂನಿಯರ್ ಕಾಲೇಜಿನ ಮೈದಾನದಲ್ಲಿ  ಕಿಸಾನ್ ಸಮ್ಮಾನ್ ಯೋಜನೆಯ 4ನೇ ಹಂತದ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಭಾಗಿಯಾಗಲು  ಪ್ರಧಾನಿ ಮೋದಿಯವರು ನಾಳೆ ತುಮಕೂರಿಗೆ ಬರಲಿದ್ದಾರೆ. ಈ ಹಿನ್ನಲೆಯಲ್ಲಿ ಸುಮಾರು 1 ಲಕ್ಷಕ್ಕೂ ಅಧಿಕ ಮಂದಿ ರೈತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎನ್ನಲಾಗಿದೆ.
									
			
			 
 			
 
 			
			                     
							
							
			        							
								
																	
ಅಲ್ಲದೇ ಭದ್ರತಾ ದೃಷ್ಟಿಯಿಂದ  ಎಂಪ್ರೆಸ್ ಕಾಲೇಜು ಹಾಗೂ ಸರ್ಕಾರಿ ಜೂನಿಯರ್ ಕಾಲೇಜಿಗೆ ನಾಳೆ ರಜೆ ಘೋಷಿಸುವಂತೆ ಜಿಲ್ಲಾಡಳಿತ ಆದೇಶಿಸಿದೆ.