Select Your Language

Notifications

webdunia
webdunia
webdunia
webdunia

ಶ್ರೀಗಳ ಆರೋಗ್ಯದಲ್ಲಿ ಏರು ಪೇರಾದ ಹಿನ್ನೆಲೆ; ರಾಜ್ಯಾದ್ಯಂತ ಬಿಗಿ ಪೊಲೀಸ್ ಭದ್ರತೆ

ಶ್ರೀಗಳ ಆರೋಗ್ಯದಲ್ಲಿ ಏರು ಪೇರಾದ ಹಿನ್ನೆಲೆ; ರಾಜ್ಯಾದ್ಯಂತ ಬಿಗಿ ಪೊಲೀಸ್ ಭದ್ರತೆ
ತುಮಕೂರು , ಸೋಮವಾರ, 21 ಜನವರಿ 2019 (11:08 IST)
ತುಮಕೂರು : ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಏರು ಪೇರಾಗಿರುವ ಹಿನ್ನೆಲೆಯಲ್ಲಿ ಮಠದ ಸುತ್ತಮುತ್ತ ಹಾಗೂ ರಾಜ್ಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್  ಮಾಡಲಾಗಿದೆ.


ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲು ತುಮಕೂರು, ಬೆಂಗಳೂರು, ರಾಮನಗರ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ ಮತ್ತು ಚಿಕ್ಕಬಳ್ಳಾಪುರ ಸೇರಿದಂತೆ ಸುತ್ತಮುತ್ತಾ ಬಿಗಿ ಪೊಲೀಸ್ ಭದ್ರತೆಯನ್ನು ನಿಯೋಜನೆ ಮಾಡಲಾಗಿದೆ. ಭದ್ರತೆಗೆ ಕೇಂದ್ರ ವಲಯದ 8 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.


ಸದ್ಯಕ್ಕೆ ಸಿದ್ದಗಂಗಾ ಮಠಕ್ಕೆ ಕೇಂದ್ರ ವಲಯದ ಪೊಲೀಸರು ತೆರಳುತ್ತಿದ್ದು, ತುಮಕೂರು ಸಂಪರ್ಕ ಕಲ್ಪಿಸುವ ರಸ್ತೆ ಮಾರ್ಗದಲ್ಲೂ ಬದಲಾವಣೆ ಮಾಡಲಾಗಿದೆ. ದಾಬಸ್‍ಪೇಟೆ, ಶಿರಾ ಕುಣಿಗಲ್ ಹೀಗೆ ಸಿದ್ದಗಂಗಾ ಮಠಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಮಾರ್ಗದಲ್ಲಿ ಬದಲಾವಣೆ ಮಾಡಿದೆ. ಮಠದ ಆವರಣದಲ್ಲೇ ಸಂಸ್ಕೃತ ಕಾಲೇಜಿನ 2ನೇ ಮಹಡಿಯಲ್ಲಿ ಪೊಲೀಸ್ ಕಂಟ್ರೋಲ್ ಗೆ ವ್ಯವಸ್ಥೆ ಮಾಡಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಏರುಪೇರು