Publish Date: Tue, 02 Jan 2018 (20:05 IST)
Updated Date: Tue, 02 Jan 2018 (20:07 IST)
ಚನ್ನಪಟ್ಟಣ ಕ್ಷೇತ್ರದಲ್ಲಿ ಯಾವುದೇ ಕಾರಣಕ್ಕೂ ಬಿಜೆಪಿ ಗೆಲ್ಲುವುದಿಲ್ಲ. ಬೇಕಾದರೆ ನಾನು ಬೆಟ್ಟು ಕಟ್ಟುತ್ತೇನೆ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಸವಾಲು ಹಾಕಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣದ ಶಾಸಕರು ಕೇವಲ ರಾಜಕಾರಣ ಮಾಡುತ್ತಿದ್ದಾರೆ. ನಾವು ಅಭಿವೃದ್ಧಿ ರಾಜಕಾರಣ ಮಾಡುತ್ತೇವೆ. ಆದ್ದರಿಂದ ಜೆಪಿ ಗೆಲ್ಲಲು ಸಾಧ್ಯವೇ ಇಲ್ಲ ಎಂದಿದ್ದಾರೆ.
2018ರ ವಿಧಾನಸಭೆ ಚುನಾವಣೆಯಲ್ಲಿ ನಾವೇ ಅಧಿಕಾರಕ್ಕೆ ಬರುವುದು. ಇದರಲ್ಲಿ ಯಾವುದೇ ಅನುಮಾನ ಇಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸರ್ವೆ ಮಾಡಿಸಿದ್ದಾರೆ. ಅದೇ ರೀತಿ ಪಕ್ಷದ ವತಿಯಿಂದಲೂ ಮಾಡಿಸಿರುವ ಸರ್ವೆಯಲ್ಲೂ ಜನರ ಒಲವು ನಮ್ಮ ಪರವಾಗಿದೆ ಎಂದು ತಿಳಿಸಿದ್ದಾರೆ.
ಕೂಡ್ಲಿಗಿ ಕ್ಷೇತ್ರದ ಶಾಸಕ ನಾಗೇಂದ್ರ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವುದು ಸಂತೋಷದ ವಿಷಯ. ಅವರು ನನಗೆ ಹೆಚ್ಚು ಆತ್ಮೀಯರು. ಅವರು ಬರುವುದರಿಂದ ಪಕ್ಷಕ್ಕೆ ಅನುಕೂಲವಾಗಲಿದೆ ಎಂದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.