Select Your Language

Notifications

webdunia
webdunia
webdunia
webdunia

ನಗರದಲ್ಲಿ ನಾಳೆ ಬಿಜೆಪಿ ಕೋರ್ ಕಮಿಟಿ ಸಭೆ

ಯಡಿಯೂರಪ್ಪ
ಬೆಂಗಳೂರು , ಶನಿವಾರ, 27 ಮೇ 2017 (18:55 IST)
ನಗರದಲ್ಲಿ ನಾಳೆ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವ ವಹಿಸಲಿದ್ದಾರೆ.
 
ಬಿಜೆಪಿ ಅತೃಪ್ತರ ಸಭೆಯ ನಂತರ ಮೊದಲ ಬಾರಿ ಕೋರ್ ಕಮಿಟಿ ಸಭೆ ನಡೆಯಲಿದೆ. ನಾಳೆ ಮಧ್ಯಾಹ್ನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸಭೆ ನಡೆಯಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
 
ಬರ ಅಧ್ಯಯನ ಪ್ರವಾಸ, ಬಿಜೆಪಿಯಲ್ಲಿನ ಅತೃಪ್ತರ ಸಮಸ್ಯೆಗಳ ಬಗ್ಗೆ ಚರ್ಚೆಯಾಗಲಿವೆ ಎನ್ನಲಾಗಿದೆ. 
 
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ನಡುವಿನ ಭಿನ್ನಮತ ಕೋರ್ ಕಮಿಟಿ ಸಭೆಯ ನಂತರ ಅಂತ್ಯವಾಗಲಿದೆಯೋ ಇಲ್ಲವೋ ಎನ್ನುವುದನ್ನು ಕಾದು ನೋಡಬೇಕಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಸಚಿನ್​​ ಎ ಬಿಲಿಯನ್​ ಡ್ರೀಮ್ಸ್ ಚಿತ್ರದ ಮೊದಲ ದಿನದ ಗಳಿಕೆ 7 ಕೋಟಿ