Select Your Language

Notifications

webdunia
webdunia
webdunia
webdunia

ಕರ್ನಾಟಕದ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ಬದಲಾವಣೆ ಮಾಡದಿರಲು ಬಿಜೆಪಿ ಹೈ ಕಮಾಂಡ್ ತೀರ್ಮಾನ

ಕರ್ನಾಟಕದ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ಬದಲಾವಣೆ ಮಾಡದಿರಲು ಬಿಜೆಪಿ ಹೈ ಕಮಾಂಡ್ ತೀರ್ಮಾನ
ಬೆಂಗಳೂರು , ಶುಕ್ರವಾರ, 31 ಮೇ 2019 (11:20 IST)
ಬೆಂಗಳೂರು : ಕರ್ನಾಟಕದ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ಬದಲಾವಣೆ ಮಾಡದಿರಲು ಬಿಜೆಪಿ ಹೈ ಕಮಾಂಡ್ ತೀರ್ಮಾನ ಮಾಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.




ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ 25 ಸ್ಥಾನ ಪಡೆದು ಗೆಲುವು ಸಾಧಿಸಿದೆ. ಈ ರೀತಿ ಬಿಜೆಪಿಯ ಗೆಲುವಿಗೆ ಕಾರಣರಾದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರನ್ನು ರಾಜ್ಯದಲ್ಲಿ ಸರ್ಕಾರ ರಚನೆ ಆಗುವವರೆಗೂ ರಾಜ್ಯಾಧ್ಯಕ್ಷ ಸ್ಥಾನದಿಂದ ಬದಲಾವಣೆ ಮಾಡದಿರಲು ಹೈಕಮಾಂಡ್ ನಿರ್ಧರಿಸಿದೆ.


ಹಾಗೇ ರಾಜ್ಯದಲ್ಲಿ ಹೇಗಾದ್ರೂ ಮಾಡಿ ಜೆಡಿಎಸ್ ಮತ್ತು ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವನ್ನು ಕೆಳಗಿಳಿಸಿ ಬಿಜೆಪಿ ಸರ್ಕಾರ ರಚನೆ ಮಾಡಿ ಎಂದು ಕೇಂದ್ರ ನಾಯಕರು ರಾಜ್ಯದವರಿಗೆ ತಿಳಿಸಿದ್ದಾರೆ. ಕೇಂದ್ರದ ನಾಯಕರ ಜೊತೆಗೆ ಯಡಿಯೂರಪ್ಪ ಈ ಕುರಿತು ಮಾತುಕತೆ ನಡೆಸಿದ್ದಾರೆನ್ನಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಗ್ರೆನೇಡ್ ಪತ್ತೆ