Select Your Language

Notifications

webdunia
webdunia
webdunia
webdunia

ಬಿಜೆಪಿಯವರು ಯೋಧರ ಜೀವನದ ಜೊತೆ ಚೆಲ್ಲಾಟವಾಡುತ್ತಿದ್ದಾರೆ- ಸಿಎಂ ಕುಮಾರಸ್ವಾಮಿ ಆರೋಪ

ಬಿಜೆಪಿಯವರು ಯೋಧರ ಜೀವನದ ಜೊತೆ ಚೆಲ್ಲಾಟವಾಡುತ್ತಿದ್ದಾರೆ- ಸಿಎಂ ಕುಮಾರಸ್ವಾಮಿ ಆರೋಪ
ಮಡಿಕೇರಿ , ಶುಕ್ರವಾರ, 1 ಮಾರ್ಚ್ 2019 (06:42 IST)
ಮಡಿಕೇರಿ : ಲೋಕಸಭಾ ಚುನಾವಣೆಗೆ ಬಿಜೆಪಿಯವರು ಸಿದ್ಧವಾಗುತ್ತಿದ್ದು, ಹೆಚ್ಚು ಸ್ಥಾನಗಳನ್ನು ಗೆಲ್ಲುವ ನಿಟ್ಟಿನಲ್ಲಿ ಯೋಧರ ಜೀವನದ ಜೊತೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಸಿಎಂ ಕುಮಾರಸ್ವಾಮಿ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಸೋಮವಾರಪೇಟೆ ತಾಲೂಕಿನ ಹಾರಂಗಿಯಲ್ಲಿ ಮಾತನಾಡಿದ ಸಿಎಂ, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರ ಹೇಳಿಕೆ ಗಮನಿಸಿದಾಗ ಆ ಪಕ್ಷದ ಭಾವನೆಗಳು ಏನು ಎನ್ನುವುದನ್ನು ಜನರು ಅರ್ಥ ಮಾಡಿಕೊಂಡಿದ್ದಾರೆ. ಲೋಕಸಭಾ ಚುನಾವಣೆಗೆ ಬಿಜೆಪಿಯವರು ಸಿದ್ಧವಾಗುತ್ತಿದ್ದು, ಹೆಚ್ಚು ಸ್ಥಾಗಳನ್ನು ಗೆಲ್ಲುವ ನಿಟ್ಟಿನಲ್ಲಿ ಯೋಧರ ಜೀವನದ ಜೊತೆ ಚೆಲ್ಲಾಟವಾಡುತ್ತಿದ್ದಾರೆ. ಅವರಿಗೆ ಜನ ತಕ್ಕ ಪಾಠ ಕಲಿಸುತ್ತಾರೆ ಎಂದು ಕಿಡಿಕಾರಿದ್ದಾರೆ.

 

ಬಿಜೆಪಿಗೆ ಅಧಿಕಾರ ದಾಹವಿದೆ. ಅವರ ನಡವಳಿಕೆಯ ಬಗ್ಗೆ ಜನರು ತಿಳುವಳಿಕೆ ಹೊಂದಿದ್ದಾರೆ. ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ಘಟನೆಗಳಲ್ಲಿ ಭಾರೀ ಅನಾಹುತಗಳು ಸಂಭವಿಸಿವೆ. ಅವುಗಳಿಗೆ ಸಂಬಂಧಿಸಿದ ವಾಸ್ತವವನ್ನು ಜನರ ಮುಂದೆ ತೆರೆದಿಡದೇ ಘಟನೆಗಳನ್ನು ವಿಜ್ರಂಭಿಸಲಾಗುತ್ತಿದೆ. ಇದರಿಂದ ದೇಶಕ್ಕೆ ಹಾಗೂ ಪ್ರಜೆಗಳಿಗೆ ಯಾವುದೇ ಲಾಭವಿಲ್ಲ ಎಂದು ಹೇಳಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ

 


Share this Story:

Follow Webdunia kannada

ಮುಂದಿನ ಸುದ್ದಿ

ಸುಮ್ಮನೆ ಕನ್ನಡ ಕನ್ನಡ ಎನ್ನೋರು ಮಕ್ಕಳಿಗೆ ಇಂಗ್ಲಿಷ್ ಕಲಿಸ್ತಿದ್ದಾರೆ ಎಂದ ಡಿಕೆಶಿ