Publish Date: Wed, 06 Dec 2017 (16:52 IST)
Updated Date: Wed, 06 Dec 2017 (16:54 IST)
ಐಸಿಸ್ ಸಂಘಟನೆಯಂತೆ ರಾಜ್ಯದಲ್ಲಿ ಬಿಜೆಪಿಯವರು ವರ್ತಿಸುವ ಮೂಲಕ ರಾಜ್ಯದಲ್ಲಿ ಶಾಂತಿ ಕದಡುತ್ತಿದ್ದಾರೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಆರೋಪಿಸಿದ್ದಾರೆ.
ಮಾಧ್ಯಮದವರ ಜೊತೆ ಮಾತನಾಡಿ, ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದ ಹನುಮ ಜಯಂತಿ ಗಲಾಟೆಯಲ್ಲಿ ಸಂಸದ ಪ್ರತಾಪಸಿಂಹ ಕಾನೂನು ಸುವ್ಯವಸ್ಥೆಗೆ ಧಕ್ಕೆ ಮಾಡಿದ್ದಕ್ಕೆ ಅವರನ್ನು ಬಂಧಿಸಲಾಗಿತ್ತು ಎಂದು ತಿಳಿಸಿದ್ದಾರೆ.
ಕಾನೂನು ಉಲ್ಲಂಘನೆ ಮಾಡುವವರು ಯಾರೇ ಆಗಿರಲಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದ ಅವರು, ಬಿಜೆಪಿಯವರು ಉಗ್ರ ಸಂಘಟನೆಗಳಂತೆ ವರ್ತನೆ ಮಾಡುವ ಮೂಲಕ ಶಾಂತಿ, ಸುವ್ಯವಸ್ಥೆ ಹಾಳು ಮಾಡುತ್ತಿದ್ದಾರೆ. ಇದನ್ನೆ ಕೆಲಸವನ್ನಾಗಿಸಿಕೊಂಡಿದ್ದಾರೆ ಎಂದು ಆರೋಪ ಮಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.