Webdunia - Bharat's app for daily news and videos

Install App

ಸಿಎಂ ಕುಮಾರಸ್ವಾಮಿ ಸರ್ಕಾರ ಅಧಿಕಾರಕ್ಕೆ ಬಂದಿದ್ದೆ ಒಂದು ವಿಚಿತ್ರ ಎಂದ ಬಿಜೆಪಿ ಮುಖಂಡ

ಬೆಳಗಾವಿ
Webdunia
ಮಂಗಳವಾರ, 26 ಫೆಬ್ರವರಿ 2019 (06:35 IST)
ಬೆಳಗಾವಿ : ಸಿಎಂ ಕುಮಾರಸ್ವಾಮಿ ಸರ್ಕಾರ ಅಧಿಕಾರಕ್ಕೆ ಬಂದಿದ್ದೆ ಒಂದು ವಿಚಿತ್ರ ಎಂದು ಬಿಜೆಪಿ ಮುಖಂಡ ಹಾಗೂ ಹುಕ್ಕೇರಿ ಶಾಸಕ ಉಮೇಶ್ ಕತ್ತಿ ವ್ಯಂಗ್ಯವಾಡಿದ್ದಾರೆ.


ಮಾಧ್ಯಮಗಳ ಜೊತೆ ಮಾತನಾಡಿರುವ ಅವರು,’ ಸಿಎಂ ಕುಮಾರಸ್ವಾಮಿ ಸರ್ಕಾರ ಅಧಿಕಾರಕ್ಕೆ ಬಂದಿದ್ದೆ ಒಂದು ವಿಚಿತ್ರ. ಕೇವಲ 72 ಜನ ಶಾಸಕರ ಬೆಂಬಲ ಪಡೆದ ಮಂತ್ರಿಯಾದ ಏಕೈಕ ಸರ್ಕಾರ ಇದು. ಪ್ರಪಂಚದಲ್ಲಿ ಎಲ್ಲೂ ಈ ರೀತಿಯ ಸರ್ಕಾರ ಕಾಣ ಸಿಗುವುದಿಲ್ಲ’ ಎಂದು ಲೇವಡಿ ಮಾಡಿದ್ದಾರೆ.


‘ಕೇವಲ 29 ಮಂದಿ ಶಾಸಕರನ್ನು ಇಟ್ಟುಕೊಂಡು ಕಾಂಗ್ರೆಸ್ ಬೆಂಬಲ ಪಡೆದು ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿದೆ. 104 ಶಾಸಕರನ್ನು ಇಟ್ಟುಕೊಂಡು ಬಿಜೆಪಿ ವಿರೋಧ ಪಕ್ಷದಲ್ಲಿದೆ. ಕುಮಾರಸ್ವಾಮಿ ಸರ್ಕಾರ ಬಂದ ಮೇಲೆ ಹಾಸನ ಹಾಗೂ ಮಂಡ್ಯ ಬಿಟ್ಟು ಬೇರೆ ಎಲ್ಲೂ ಅಭಿವೃದ್ಧಿ ಕಾರ್ಯಗಳು ಆಗುತ್ತಿಲ್ಲ. ಬೇರೆ ಯಾವುದೇ ಕ್ಷೇತ್ರಗಳಿಗೆ ಅಭಿವೃದ್ಧಿಗೆ ಹಣ ಬಿಡುಗಡೆ ಆಗುತ್ತಿಲ್ಲ. ಸಾಲ ಮನ್ನಾ ಹೆಸರಲ್ಲಿ ಸಿಎಂ ಕುಮಾರಸ್ವಾಮಿ ಕಥೆ ಹೇಳುತ್ತಿದ್ದಾರೆ. ಬಿಜೆಪಿ ಯಾವುದೇ ಆಪರೇಷನ್ ಕಮಲ ಮಾಡುತ್ತಿಲ್ಲ. ಕಾಂಗ್ರೆಸ್ ಹಾಗೂ ಜೆಡಿಎಸ್ ಕಿತ್ತಾಟದಿಂದ ಸರ್ಕಾರ ಬಿದ್ದು ಬಿಜೆಪಿ ಪಕ್ಷ ಅಧಿಕಾರಕ್ಕೆ ಬರುತ್ತದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್‌ ಘೋಷ್‌

ಫೇಸ್ ಬುಕ್‌ನಲ್ಲಿ ವಿಡಿಯೋ ಹಂಚಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ

ಮರಳು ಗಣಿಗಾರಿಕೆ ವೀಕ್ಷಿಸಲು ಹೋದ ವಿಜಯೇಂದ್ರಗೆ ಖರ್ಗೆ ಬೆಂಬಲಿಗರಿಂದ ಅಡ್ಡಿ: ಬಿಜೆಪಿ ಕೆಂಡಾಮಂಡಲ

ನಾಯಿಗಾಗಿ ಹೆತ್ತು, ಹೊತ್ತ ತಾಯಿಯನ್ನೇ ಹತ್ಯೆ ಮಾಡಿದ ಕ್ರೂರಿ ಮಗ

ಮುಂದಿನ ಸುದ್ದಿ
Show comments