Publish Date: Tue, 12 Dec 2017 (12:00 IST)
Updated Date: Tue, 12 Dec 2017 (12:03 IST)
ಪರಿವರ್ತನಾ ಯಾತ್ರೆ ಮಾಡುವ ಮೊದಲು ಬಿಜೆಪಿ ನಾಯಕರು ತಮ್ಮ ನಡುವಳಿಕೆಯನ್ನು ಬದಲಾಯಿಸಿಕೊಂಡು, ಆಚಾರ-ವಿಚಾರ ಹಾಗೂ ಸಿದ್ಧಾಂತಗಳನ್ನು ಪಾಲನೆ ಮಾಡಲಿ. ಆಗ ಜನರು ಅವರಿಗೆ ಮನ್ನಣೆ ನೀಡುತ್ತಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಹಿಂದೆ ಐದು ವರ್ಷದ ಆಡಳಿತ ನಡೆಸಿದ ಸಂದರ್ಭದಲ್ಲಿ ಬಿಜೆಪಿಯವರು ಏನೆಲ್ಲಾ ಮಾಡಿದ್ದಾರೆ ಎಂಬುದು ಜನತೆ ನೋಡಿದ್ದಾರೆ. ಆದ್ದರಿಂದ ಅವರು ಪರಿವರ್ತನೆಯಾಗಬೇಕು ಎಂದು ತಿಳಿಸಿದ್ದಾರೆ.
ಟೀಕೆ ಮಾಡುವುದರಲ್ಲಿ ನನಗೆ ವಿಶ್ವಾಸವಿಲ್ಲ. ಆದರೆ, ಬಿಜೆಪಿಯವರು ಪರಿವರ್ತನಾ ಯಾತ್ರೆ ಮಾಡುವವರು ಕೂಡ ಬದಲಾಗಲಿ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.