Publish Date: Wed, 20 Sep 2017 (09:17 IST)
Updated Date: Wed, 20 Sep 2017 (09:20 IST)
ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆಯಾಗಿದೆ ಎಂಬ ಸುದ್ದಿ ಹರಡಿದ್ದು, ಪ್ರಯಾಣಿಕರು ಕಂಗಾಲಾದ ಘಟನೆ ನಡೆದಿದೆ.
ನಿನ್ನೆ ಪ್ರಯಾಣಿಕರ ಸ್ಕ್ರೀನಿಂಗ್ ತಪಾಸಣಾ ವೇಳೆ ಬಾಂಬ್ ಪತ್ತೆಯಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದೆ. ಆದ್ರೆ ಯಾವುದೇ ಬಾಂಬ್ ಪತ್ತೆಯಾಗಿಲ್ಲ ಎಂದು ವಿಮಾನ ನಿಲ್ದಾಣದ ತಪಾಸಣಾ ಅಧಿಕಾರಿಗಳು ಖಚಿತಪಡಿಸಿದ್ದಾರೆ.
ಪ್ರಯಾಣಿಕರ ಬ್ಯಾಗನ್ನು ಸ್ಕ್ರೀನಿಂಗ್ ತಪಾಸಣೆ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಸ್ಫೋಟಕ ವಸ್ತುಗಳಿಂದ ಬರುವ ಮಾದರಿಯ ಬೀಪ್ ಸೌಂಡ್ ಕೇಳಿ ಬಂದಿದೆ. ಹೆಚ್ಚಿನ ತಪಾಸಣೆ ಮಾಡಿದಾಗ ಬ್ಯಾಗ್ ನಲ್ಲಿ ಮೊಬೈಲ್ ಚಾರ್ಜ್ ಮಾಡಲು ಬಳಸುವ ಪವರ್ ಬ್ಯಾಂಕ್ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ತನಿಖೆಗಾಗಿ ಪವರ್ ಬ್ಯಾಂಕನ್ನು ತಪಾಸಣಾ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.