Publish Date: Tue, 08 Jan 2019 (17:53 IST)
Updated Date: Tue, 08 Jan 2019 (17:56 IST)
ಕೇಂದ್ರ ಸರ್ಕಾರದ ಕಾರ್ಮಿಕ ನೀತಿಯನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳು ಕೊಟ್ಟಿದ್ದ ಭಾರತ ಬಂದ್ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆಯಲ್ಲಿ ನೀರಸ ಸ್ಪಂದನೆ ನಡುವೆ ಬೃಹತ್ ಪ್ರತಿಭಟನೆಯನ್ನು ಮಾಡಲಾಯಿತು.
ಬಿಸಿಯೂಟ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಗ್ರಾಮ ಪಂಚಾಯತಿ ನೌಕರರು ಹಾಗೂ ಎಸ್ ಎಫ್ ಐ ವಿದ್ಯಾರ್ಥಿ ಫೆಡರೇಶನ್ ಸೇರಿದಂತೆ ಅನೇಕ ಕಾರ್ಮಿಕ ಸಂಘಟನೆಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದವು. ಹಾವೇರಿಯ ಪುರಸಿದ್ದೇಶ್ವರ ದೇವಸ್ಥಾನದಿಂದ ಸಿದ್ದಪ್ಪ ಸರ್ಕಲ್ ವರೆಗೂ ಮೆರವಣಿಗೆ ಮೂಲಕ ಬೃಹತ್ ಪ್ರತಿಭಟನೆಯನ್ನು ನಡೆಸಿದ್ರು.
ಸಾವಿರಾರು ಕಾರ್ಮಿಕರು ಮೆರವಣಿಗೆಯಲ್ಲಿ ಭಾಗಿಯಾಗಿದ್ದರು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇನ್ನೂ ಬಂದ್ ಗೆ ಹಾವೇರಿ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.