Select Your Language

Notifications

webdunia
webdunia
webdunia
webdunia

ಲವ್ ಲೆಟರ್ ಕೊಟ್ಟ ಹುಡುಗನಿಗೆ ಶಿಕ್ಷಕಿ ಕೊಟ್ಟ ಶಿಕ್ಷೆ ಏನು ಗೊತ್ತ!?

ಲವ್ ಲೆಟರ್ ಕೊಟ್ಟ ಹುಡುಗನಿಗೆ ಶಿಕ್ಷಕಿ ಕೊಟ್ಟ ಶಿಕ್ಷೆ ಏನು ಗೊತ್ತ!?
ಕಾರವಾರ , ಸೋಮವಾರ, 31 ಜನವರಿ 2022 (06:14 IST)
ಕಾರವಾರ :  ಪ್ರಪಂಚ ಏನು ಎಂಬುದನ್ನ ತಿಳಿದುಕೊಳ್ಳುವ ಶಕ್ತಿಯು ಸಹ ಇಲ್ಲದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿ ವಿದ್ಯಾರ್ಥಿನಿಗೆ ಲವ್ ಲೆಟರ್ ಕೊಟ್ಟು ಶಾಲೆಯ ಶಿಕ್ಷಕಿಯಿಂದ ಬಾಸುಂಡೆ ಬರುವಂತೆ ಹೊಡೆತ ತಿಂದಿದ್ದಾನೆ.
 
ಹೊನ್ನಾವರದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ.  ಆರನೇ ತರಗತಿ ವಿದ್ಯಾರ್ಥಿ ತನ್ನ ಸಹಪಾಠಿ ವಿದ್ಯಾರ್ಥಿನಿಗೆ ಸಿನಿಮಾ ಸ್ಟೈಲ್ನಲ್ಲಿ ಲವ್ ಲೆಟರ್ ಕೊಟ್ಟು ಪ್ರೇಮ ನಿವೇದನೆ ಮಾಡಿಕೊಂಡಿದ್ದಾನೆ.

ವಿದ್ಯಾರ್ಥಿನಿ ಈ ಲೆಟರ್ನ್ನು ಶಾಲೆಯ ಶಿಕ್ಷಕಿ ಕಲ್ಪನ ಹೆಗಡೆಯವರಿಗೆ ನೀಡಿದ್ದಾಳೆ.  ಲವ್ ಲೆಟರ್ ನೋಡಿ ಸಿಟ್ಟಾದ ಶಿಕ್ಷಕಿ ವಿದ್ಯಾರ್ಥಿಯನ್ನು ಕರೆಯಿಸಿ ಕೋಪದಿಂದ ಬಾಸುಂಡೆ ಬರುವಂತೆ ಹೊಡೆದಿದ್ದಾರೆ. ಅವರ ಹೊಡೆತಕ್ಕೆ ಬಾಲಕನ ಬೆನ್ನುಗಳಲ್ಲಿ ಬಾಸುಂಡೆ ಎದ್ದು ನಲುಗಿ ಹೋಗಿದ್ದಾನೆ.

ಈ ವಿಷಯ ತಡವಾಗಿ ಪೋಷಕರಿಗೆ ತಿಳಿದಿದ್ದು ,ಬಾಲಕನ ಬಟ್ಟೆ ಬಿಚ್ಚಿ ನೋಡಿದಾಗ ಬೆನ್ನು ಕೆಂಪಾಗಿತ್ತು.   ತಕ್ಷಣ ಪೋಷಕರು ಶಿಕ್ಷಕಿಯನ್ನು ತರಾಟೆ ತೆಗೆದುಕೊಂಡಿದ್ದು ಗಲಾಟೆ ನಡೆದಿದೆ. ಕೊನೆಗೆ ಶಿಕ್ಷಕಿ ಪೋಷಕರಲ್ಲಿ ಕ್ಷಮೆ ಕೇಳುವ ಮೂಲಕ ಪ್ರಕರಣ ಇತ್ಯರ್ಥವಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಪ್ರಧಾನಮಂತ್ರಿಯವರ 15 ಅಂಶಗಳ ಕಾರ್ಯಕ್ರಮ ಪ್ರಗತಿಗೆ ಸೂಚನೆ