Select Your Language

Notifications

webdunia
webdunia
webdunia
webdunia

ಎತ್ತಿನಹೊಳೆ ನಾಲೆಯ ಕಾಮಗಾರಿ ಗುಂಡಿಗೆ ಬಿದ್ದು ಬಾಲಕರು ದಾರುಣ ಸಾವು

Ettinahole project work

Sampriya

ತುಮಕೂರು , ಶುಕ್ರವಾರ, 8 ನವೆಂಬರ್ 2024 (14:38 IST)
ತುಮಕೂರು: ಎತ್ತಿನಹೊಳೆ ನಾಲೆಯ ಕಾಮಗಾರಿ ಬಳಿ ತೆಗೆದಿದ್ದ ಗುಂಡಿಗೆ ಬಿದ್ದು ಇಬ್ಬರು ಬಾಲಕರು ಮೃತಪಟ್ಟ ಘಟನೆ ಜಿಲ್ಲೆಯ ತಿಪಟೂರು ತಾಲ್ಲೂಕಿನ ಹುಚ್ಚಿನಹಟ್ಟಿ ಗ್ರಾಮ ಸಮೀಪ ನಡೆದಿದೆ.

ಹುಚ್ಚನಹಟ್ಟಿ ಗ್ರಾಮದ ಯದುವೀರ್ (8) ಹಾಗೂ ಮನೋಹರ್ (10) ಮೃತ ಬಾಲಕರು. ಸ್ಥಳಕ್ಕೆ ಶಾಸಕ ಕೆ.ಷಡಕ್ಷರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್‌ ಭೇಟಿ ನೀಡಿ ಪರಿಶೀಲಿಸಿದರು.

ನಗರಕ್ಕೆ ಹೊಂದಿಕೊಂಡಿರುವ ಹುಚ್ಚನಹಟ್ಟಿ ಗ್ರಾಮದ ಬಳಿ ಎತ್ತಿನಹೊಳೆ ನೀರಾವರಿ ಯೋಜನೆ ಕಾಮಗಾರಿ ನಡೆಯುತ್ತಿದ್ದು, ಸ್ಥಳದಲ್ಲಿ ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಂಡಿಲ್ಲ. ಸ್ಥಳಕ್ಕೆ ಹೋಗಿದ್ದ ಮಕ್ಕಳು ಆಕಸ್ಮಿಕವಾಗಿ ಬಿದ್ದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಗುರುವಾರ ಸಂಜೆ ಶಾಲೆ ಮುಗಿಸಿಕೊಂಡು ಮನೆಗೆ ಬಂದಿದ್ದ ಮಕ್ಕಳು, ನಂತರ ಹೊರ ಹೋಗಿದ್ದರು. ಸಂಜೆಯಾದರೂ ಮನೆಗೆ ಬಂದಿರಲಿಲ್ಲ. ಆತಂಕಗೊಂಡ ಪೋಷಕರು ತಿಪಟೂರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಶುಕ್ರವಾರ ಬೆಳಿಗ್ಗೆ ಇಬ್ಬರು ಬಾಲಕರ ಶವ ಪತ್ತೆಯಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮತ್ತೆ ವಿದ್ಯುತ್ ಬೆಲೆ ಏರಿಕೆ ಶಾಕ್: ವಿದ್ಯುತ್ ಖರೀದಿ ಹೊರೆ ಗ್ರಾಹಕರ ಮೇಲೆ