Select Your Language

Notifications

webdunia
webdunia
webdunia
Monday, 21 April 2025
webdunia

ಬಸ್ ತಡೆದು ವಿದ್ಯಾರ್ಥಿಗಳು, ಊರಿನ ಜನರು ಮಾಡಿದ್ರು ಇಂಥ ಕೆಲಸ

ಬಸ್ ಸಂಚಾರ
ಹುಬ್ಬಳ್ಳಿ , ಬುಧವಾರ, 9 ಅಕ್ಟೋಬರ್ 2019 (17:11 IST)
ಸರಿಯಾದ ಸಮಯಕ್ಕೆ ಸಾರಿಗೆ ಬಸ್ ಬಿಡುತ್ತಿಲ್ಲ ಎಂದು ಆಗ್ರಹಿಸಿ ರಸ್ತೆಯನ್ನು ತಡೆದು ಶಾಲಾ - ಕಾಲೇಜು ವಿದ್ಯಾರ್ಥಿಗಳು ಧರಣಿ ನಡೆಸಿದ್ದಾರೆ.

ಹುಬ್ಬಳ್ಳಿಯ ಇಂಗಳಗಿ ಗ್ರಾಮದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಪ್ರತಿ ದಿನ ಸರಿಯಾದ ಸಮಯಕ್ಕೆ ಬಸ್ ಬರದೇ ಇರುವ ಕಾರಣ ಶಾಲಾ - ಕಾಲೇಜುಗಳಿಗೆ ಸರಿಯಾದ ಸಮಯಕ್ಕೆ ಹೋಗಲಾಗುತ್ತಿಲ್ಲ. ಪರಿಣಾಮ ಕಲಿಕೆಗೆ ತೊಂದರೆಯಾಗುತ್ತಿದೆ. ಅಲ್ಲದೇ ಶಾಲಾ - ಕಾಲೇಜುಗಳ ಆಡಳಿತ ಮಂಡಳಿಯಿಂದ ಬೈಯಿಸಿಕೊಳ್ಳುವಂತಾಗಿದೆ.‌

ಗ್ರಾಮದ ಜನರು ಕೆಲಸಕ್ಕೆ ಹೋಗಬೇಕೆಂದರೂ ಇದೇ ಸಮಸ್ಯೆ ಎದುರಾಗುತ್ತಿದೆ. ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಸರಿಯಾದ ಸಮಯಕ್ಕೆ ಬಸ್ ವ್ಯವಸ್ಥೆ ಕಲ್ಪಿಸಿ ಜನರಿಗೆ ಅನುಕೂಲ ಮಾಡಿಕೊಡಬೇಕು. ಇಲ್ಲದೇ ಹೋದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಅಂತ ಜನರು ಎಚ್ಚರಿಸಿದ್ದಾರೆ.  


Share this Story:

Follow Webdunia kannada

ಮುಂದಿನ ಸುದ್ದಿ

ನರಭಕ್ಷಕ ಹುಲಿ ಪಡೆದ ಬಲಿ ಎಷ್ಟು ಗೊತ್ತಾ?