Select Your Language

Notifications

webdunia
webdunia
webdunia
webdunia

ಉಪಚುನಾವಣೆಯ ಹಿನ್ನಲೆ; ಮತದಾರರಿಗೆ ಹಂಚಲು ಸಂಗ್ರಹಿಸಿಟ್ಟ 30 ಸಾವಿರ ಸೀರೆ ವಶ

ಉಪಚುನಾವಣೆಯ ಹಿನ್ನಲೆ; ಮತದಾರರಿಗೆ ಹಂಚಲು ಸಂಗ್ರಹಿಸಿಟ್ಟ 30 ಸಾವಿರ ಸೀರೆ ವಶ
ಮೈಸೂರು , ಶನಿವಾರ, 16 ನವೆಂಬರ್ 2019 (10:27 IST)
ಮೈಸೂರು : ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಹಿನ್ನಲೆಯಲ್ಲಿ ಮತದಾರರಿಗೆ ಹಂಚಲು ಸಂಗ್ರಹಿಸಿಟ್ಟ 30 ಸಾವಿರ ಸೀರೆಗಳನ್ನು ವಶಕ್ಕೆ ಪಡೆಯಲಾಗಿದೆ.



ಮೈಸೂರಿನ ವಿಜಯನಗರದ ಬಡಾವಣೆಯ ಮನೆಯಲ್ಲಿ ಯೋಗೇಶ್ವರ್ ಗೆ ಮತ ಹಾಕುವಂತೆ ಕರಪತ್ರ ಅಂಟಿಸಿದ 30 ಸಾವಿರ ಸೀರೆಗಳನ್ನು ಚೀಲಗಳಲ್ಲಿ ತುಂಬಿಸಿಟ್ಟಿದ್ದರು. ಇವುಗಳನ್ನು ಇದೀಗ ಚುನಾವಣಾ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. 

 

ಯೋಗೇಶ್ವರ್ ಹುಣಸೂರು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಬದಲಾದ ಪರಿಸ್ಥಿತಿಯಲ್ಲಿ ಎಚ್.ವಿಶ್ವನಾಥ್ ಗೆ ಟಿಕೆಟ್ ನೀಡಲಾಗಿತ್ತು. ಆದಕಾರಣ ಅಭ್ಯರ್ಥಿ ಘೋಷಣೆಗೂ ಮುನ್ನವೇ ಸಂಗ್ರಹಿಸಿಟ್ಟಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಬಗ್ಗೆ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 


Share this Story:

Follow Webdunia kannada

ಮುಂದಿನ ಸುದ್ದಿ

ಉಪಚುನಾವಣೆಯ ನಂತರ ಬಿಜೆಪಿಗೆ ಸಂಕಷ್ಟ ಕಟ್ಟಿಟ್ಟಬುತ್ತಿ- ಸಿದ್ದರಾಮಯ್ಯ