Publish Date: Mon, 26 Aug 2019 (12:25 IST)
Updated Date: Mon, 26 Aug 2019 (12:27 IST)
ಬೆಂಗಳೂರು : ಮಧ್ಯಂತರ ಚುನಾವಣೆ ಯಾವ ಸಮಯದಲ್ಲಾದರೂ ಬರಬಹುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಯಡಿಯೂರಪ್ಪನವರ ಸರ್ಕಾರ ಹೆಚ್ಚು ಕಾಲ ನಿಲ್ಲುವುದು ಕಷ್ಟ. ಹೀಗಾಗಿ ಮಧ್ಯಂತರ ಚುನಾವಣೆ ಯಾವ ಸಮಯದಲ್ಲಾದರೂ ಬರಬಹುದು. ಈ ಉದ್ದೇಶಕ್ಕಾಗಿ ಪಕ್ಷ ಬಲಪಡಿಸುವಂತೆ ನಮ್ಮವರಿಗೆ ಕರೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.
ಮತ್ತೊಂದು ಟ್ವೀಟ್ ಮಾಡಿರುವ ಅವರು, ಪ್ರವಾಹ ಪರಿಸ್ಥಿತಿ ಸಮೀಕ್ಷೆಗೆ ಕೇಂದ್ರದ ತಂಡ ಆಗಮಿಸಿದೆ. ಪ್ರವಾಹದಿಂದಾಗಿ ಸುಮಾರು 20 ಲಕ್ಷ ಎಕರೆ ಬೆಳೆ ಹಾನಿ, 80 ಜನರ ಪ್ರಾಣ ಹಾನಿಯಾಗಿದೆ, ಲಕ್ಷಾಂತರ ಮನೆಗಳು
ನೆಲಸಮಗೊಂಡಿವೆ,ಸಾವಿರಾರು ಜಾನುವಾರುಗಳು ಸಾವಿಗೀಡಾಗಿವೆ. ಇದನ್ನೆಲ್ಲ ಸೂಕ್ತವಾಗಿ ಸಮೀಕ್ಷೆ ನಡೆಸಿ, ನ್ಯಾಯಯುತ ಪರಿಹಾರ ಒದಗಿಸಲಿ ಎಂದು ಒತ್ತಾಯಿಸಿದ್ದಾರೆ.