Publish Date: Thu, 15 Jun 2023 (17:49 IST)
Updated Date: Thu, 15 Jun 2023 (18:31 IST)
ಕೇಂದ್ರ ಸರ್ಕಾರದ ಹತ್ತಿರ ಅಕ್ಕಿ ದಾಸ್ತಾನು ಇರುತ್ತೆ. ಆದರೆ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಮಾಡ್ತಿದೆ ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪಾರ್ಲಿಮೆಂಟ್ ಚುನಾವಣೆಗೆ ಕಾಂಗ್ರೆಸ್ ಪ್ರಬಲ ಆಗುತ್ತೆ ಅಂತ ಭಯ ಅವರಿಗೆ ಇದೆ. ಬಿಜೆಪಿ ನಾಯಕರಿಗೆ ಜನರ ಮೇಲೆ ಕಾಳಜಿ ಇದ್ದರೆ ಕೇಂದ್ರಕ್ಕೆ ಹೋಗಿ ಕೇಳಬೇಕಿತ್ತು. ನಮ್ಮ ಸರ್ಕಾರ ಏಳು ಕೆಜಿ ಅಕ್ಕಿ ಕೊಟ್ಟಿರುವುದನ್ನು ಬಿಜೆಪಿ ಸರ್ಕಾರ ಕಡಿಮೆ ಮಾಡಿದ್ರು. ಕೇಂದ್ರ ಸರ್ಕಾರ ಯಾರದ್ದು..? ನಾವು ಮಾಡುವ ಕಾರ್ಯಕ್ರಮಕ್ಕೆ ಕೇಂದ್ರದ ಜೊತೆ ಕೇಳ್ಬೇಕಾ..? ಬಿಜೆಪಿಯವರು ಯಡಬಿಡಂಗಿಗಳು ಇದು ಅವರಿಗೆ ಗೊತ್ತಾಗಲ್ಲ. ಸೋಲಿನ ಹತಾಶೆಯಿಂದ ಏನ್ ಮಾತಾಡ್ತಾರೆ ಅಂತ ಅವರಿಗೆ ಗೊತ್ತಾಗಲ್ಲ. ಅವರಿಗೆ ಅವರೇ ಸೋಲಿಸಿದ್ದಾರೆ ಅಂತ ಹತಾಶೆ ಆಗಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.