Select Your Language

Notifications

webdunia
webdunia
webdunia
webdunia

ಕೋಮುದ್ವೇಷಕ್ಕೆ ಬಲಿಯಾದ ಕುಟುಂಬಗಳಿಗೆ ಪರಿಹಾರ ಚೆಕ್ ವಿತರಿಸಿದ ಸಿಎಂ

The CM distributed compensation checks to the families who were victims of communal hatred
bangalore , ಸೋಮವಾರ, 19 ಜೂನ್ 2023 (21:55 IST)
ಸರ್ಕಾರ ಸರ್ವರಿಗೂ ಸೇರಿದ್ದು. ಬಿಡಿ ಬಿಡಿಯಾಗಿ ಒಂದು ಜಾತಿ, ಒಂದು ಧರ್ಮದ ಪರವಾಗಿ ವರ್ತಿಸುವುದು ಸಂವಿಧಾನ ವಿರೋಧಿ ಕೃತ್ಯವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. 
 
ಬಿಜೆಪಿ ಅವಧಿಯಲ್ಲಿ ಕೋಮುರಾಜಕಾರಣಕ್ಕೆ  ಬಲಿಯಾದ ಬಳಿಕವೂ ಸರ್ಕಾರದ ತಾರತಮ್ಯ ನೀತಿಯಿಂದ ವಂಚನೆಗೆ ಒಳಗಾಗಿದ್ದ ಆರು ಕುಟುಂಬಗಳಿಗೆ ತಲಾ 25 ಲಕ್ಷ ಮೊತ್ತದ ಪರಿಹಾರ ಚೆಕ್ ಗಳನ್ನು ವಿತರಿಸಿ ಮಾತನಾಡಿದರು. 
 
ಬಿಜೆಪಿಯ ದ್ವೇಷ ಮತ್ತು ತಾರತಮ್ಯದ ರಾಜಕಾರಣದ ವಿರುದ್ಧ ನಾನು ವಿರೋಧ ಪಕ್ಷದ ನಾಯಕನಾಗಿದ್ದಾಗ ಸದನದಲ್ಲೇ ಧ್ವನಿ ಎತ್ತಿದ್ದೆ. ಕೋಮುಗಲಭೆಗಳಿಗೆ  ಬಲಿಯಾದ ಮೃತರ ಹೆಸರಲ್ಲೂ ಬಿಜೆಪಿ ತಾರತಮ್ಯ ನೀತಿಯನ್ನು ಅನುಸರಿಸಿತು. ಮೃತರ ಕುಟುಂಬದವರ ಕಣ್ಣೀರು ಒರೆಸುವುದು ಮತ್ತು ಪರಿಹಾರ ವಿತರಣೆಯಲ್ಲೂ ಹಿಂದಿನ ಸರ್ಕಾರ ತಾರತಮ್ಯವನ್ನು ಮೆರೆದಿತ್ತು. ಹಿಂದಿನ ಬಿಜೆಪಿ ಪರಿವಾರ ಮಾಡಿದ ತಾರತಮ್ಯವನ್ನು ಸರಿ ಪಡಿಸಿದ್ದೇವೆ ಎಂದರು. 
 
ನಮ್ಮ ಅವಧಿಯಲ್ಲಿ ಕಾನೂನು ಕೈಗೆತ್ತಿಕೊಳ್ಳುವ ಮತಾಂಧರಿಗೆ, ಅನೈತಿಕ ಪೊಲೀಸ್ ಗಿರಿಗೆ, ಜಾತಿ-ಧರ್ಮದ ಹೆಸರಿನಲ್ಲಿ ಕಾನೂನು ಕೈಗೆತ್ತಿಕೊಳ್ಳುವವರಿಗೆ ತಕ್ಕ ಶಾಸ್ತಿ ಮಾಡ್ತೀವಿ. ಕಠಿಣ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸ್ಪಷ್ಟ ಸೂಚನೆ ನೀಡಿದ್ದೇನೆ ಎಂದರು. 

Share this Story:

Follow Webdunia kannada

ಮುಂದಿನ ಸುದ್ದಿ

ಹೈಗ್ರೌಂಡ್ಸ್ ಠಾಣೆಗೆ ಆಗಮಿಸಿದ ಸಚಿವ ಪ್ರಿಯಾಂಕ್ ಖರ್ಗೆ