Publish Date: Fri, 22 Sep 2023 (13:25 IST)
Updated Date: Fri, 22 Sep 2023 (13:28 IST)
ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುವ ವಿಚಾರದಲ್ಲಿ ಉಂಟಾಗಿರುವ ಬಿಕ್ಕಟ್ಟು ಶಮನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕೆಲ ಸಚಿವರು ದೆಹಲಿಯಲ್ಲಿ ಕಸರತ್ತು ನಡೆಸಿದ್ದಾರೆ. ಇಂದು ಬೆಳಗ್ಗೆ ಸಿದ್ದರಾಮಯ್ಯ ಅವರು ರಾಜ್ಯದ ನಿಯೋಗದೊಂದಿಗೆ ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿದರು. ಈ ವೇಳೆ ಇಂದಿನ ಕಾವೇರಿ ನೀರಿನ ಮಟ್ಟ ಹಾಗೂ ಮುಂದೆ ಎದುರಾಗಲಿರುವ ನೀರಿನ ಸಮಸ್ಯೆ ಬಗ್ಗೆ ವಿವರಿಸಿದ್ದಾರೆ. ಗಜೇಂದ್ರ ಸಿಂಗ್ ಶೇಖಾವತ್ ಭೇಟಿ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿದ್ದರಾಮಯ್ಯ, ಇಂದು ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿದ್ದೆವು. ಸಂಸದರು, ಕೇಂದ್ರ ಸಚಿವರು ಹಾಗೂ ಅಧಿಕಾರಿಗಳು ಇದ್ದರು. ಅವರಿಗೆ ಕರ್ನಾಟಕದ ವಾಸ್ತವಾಂಶ ತಿಳಿಸಿದ್ದೇವೆ. ಅಲ್ಲೇ CWMA ಮಾಡಿದ ಆದೇಶದ ಬಗ್ಗೆ ವಿವರಣೆ ನೀಡಿದ್ದೇನೆ ಎಂದು ಮಾಹಿತಿ ನೀಡಿದರು.