ಮದ್ದೂರು ಕೊಲೆ ಪ್ರಕರಣದ ಹಂತಕರನ್ನು ಶೂಟೌಟ್ ಮಾಡಲು ಸಿಎಂ ಆದೇಶ

ಮಂಗಳವಾರ, 25 ಡಿಸೆಂಬರ್ 2018 (11:00 IST)
ಬೆಂಗಳೂರು : ಮದ್ದೂರಿನಲ್ಲಿ ಇಂದು ಹಾಡಹಗಲೇ ನಡೆದಿರುವ ಕೊಲೆ ಪ್ರಕರಣ ಬಗ್ಗೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಬೇಸರಗೊಂಡಿದ್ದು, ಹಂತಕರನ್ನು ಶೂಟೌಟ್ ಮಾಡಲು ಆದೇಶಿಸಿದ್ದಾರೆ.


ಈ ಕುರಿತು ದೂರವಾಣಿ ಮೂಲಕ ಜಿಲ್ಲಾ ವರಿಷ್ಠಾಧಿಕಾರಿಗಳೊಂದಿಗೆ ಮಾತನಾಡಿದ ಸಿಎಂ ಅವರು, ‘ಕೊಲೆಯಾದ ವ್ಯಕ್ತಿ ತುಂಬಾ ಒಳ್ಳೆಯ ಮನುಷ್ಯನಾಗಿದ್ದ. ಈ ಹಿಂದೆಯೂ ಎರಡು ಕೊಲೆಗಳು ನಡೆದಿವೆ ಎನ್ನುವ ಮಾತು ಕೇಳಿದ್ದೇನೆ. ಕೂಡಲೇ ಹಂತಕರನ್ನು ಶೂಟೌಟ್ ಮಾಡಿ, ಯಾವುದೇ ತೊಂದರೆ ಇಲ್ಲ. ಕೊಲೆ ಮಾಡಿದ ಹಂತಕನನ್ನ ಯಾವುದೇ ಕಾರಣಕ್ಕೂ ಬಿಡಬೇಡಿ ಎಂದು ಹೇಳಿದ್ದರು.


ಈ ದೃಶ್ಯ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿ ವೈರಲ್ ಆದಾಗ ಎಚ್ಚೆತ್ತುಕೊಂಡ ಸಿಎಂ, ‘ಇಂತಹ ಘಟನೆಗಳು ಮರುಕಳಿಸಿದಂತೆ ಎಚ್ಚರ ವಹಿಸಲು ಕಾನೂನು ಪ್ರಕಾರ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿದ್ದೇನೆ. ಈ ಪ್ರಕರಣದ ಕುರಿತು ಮಾಹಿತಿ ಪಡೆಯುವ ಸಂದರ್ಭದಲ್ಲಿ ಶೂಟೌಟ್ ಎನ್ನುವ ಪದ ಬಳಕೆ ಮಾಡಿರುವುದು ಭಾವನಾತ್ಮಕ ಪ್ರತಿಕ್ರಿಯೇ ಹೊರತು ಆದೇಶವಲ್ಲ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಮಾಜಿ ಪತ್ನಿಯನ್ನು ಕೊಲೆ ಮಾಡಿದ ಆರೋಪವನ್ನು ಮುಚ್ಚಿ ಹಾಕಲು ಮಾಜಿ ಪತಿ ಮಾಡಿದ ಖತರ್ನಾಕ್ ಐಡಿಯಾ ಏನು ಗೊತ್ತಾ?