Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಸುಳ್ಳನ್ನೇ ಸೃಷ್ಟಿ ಮಾಡುವ ಕೆಲಸ ಮಾಡ್ತಿದೆ ಎಂದು ಕಿಡಿಕಾರಿದ ಸಿಎಂ

The CM said that the Congress is working to create lies
bangalore , ಭಾನುವಾರ, 30 ಅಕ್ಟೋಬರ್ 2022 (14:16 IST)
ಕೆ.ಆರ್.ಪುರಂ ಠಾಣೆ ಇನ್ಸ್‌ಪೆಕ್ಟರ್ ನಂದೀಶ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ್ ಬೊಮ್ಮಾಯಿ‌ ಪ್ರತಿಕ್ರಿಯಿಸಿದ್ದಾರೆ.ನಿನ್ನೆ ಡಿಜಿ-ಐಜಿಪಿ ಪ್ರವೀಣ್ ಸೂದ್ ನನ್ನನ್ನು ಭೇಟಿಯಾಗಿದ್ದರು.ಈ ಬಗ್ಗೆ ಮಾಹಿತಿ ಪಡೆದು ವರದಿ ನೀಡುವಂತೆ ಸೂಚನೆ ಕೊಡ್ತೀನೆ ಎಂಬುದಾಗಿ ಹೇಳಿದ್ದಾರೆ.
 
ಇದೇ ವೇಳೆ ಸಿಎಂ ಕಚೇರಿಯಿಂದ ಪತ್ರಕರ್ತರಿಗೆ ಹಣ ಹೋಗಿದೆ ಎಂಬ ವಿಚಾರವಾಗಿಯೂ ಸಿಎಂ ಪ್ರತಿಕ್ರಿಯಿಸಿದ್ದು,ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸ್ಪಷ್ಟನೆ ಕೊಟ್ಟಿದ್ದಾರೆ.ಕಾಂಗ್ರೆಸ್ ಪಕ್ಷ ಸುಳ್ಳನ್ನೇ ಸೃಷ್ಟಿ ಮಾಡುವ ಕೆಲಸ ಮಾಡುತ್ತಿದೆ.ಪತ್ರಕರ್ತರಿಗೆ ಗಿಫ್ಟ್ ಕೊಡಿ ಎಂದು ನಾನು ಯಾರಿಗೂ ಸೂಚಿಸಿಲ್ಲ.ಇದು ಕಾಂಗ್ರೆಸ್ ಟೂಲ್ ಕಿಟ್‌ನ ಮುಂದುವರಿದ ಭಾಗ.ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಐ ಫೋನ್, ಚಿನ್ನದ ನಾಣ್ಯ ನೀಡಿದ್ದರು.ಈಗ ಆರೋಪ ಮಾಡಲು ಕಾಂಗ್ರೆಸ್‌ಗೆ ಯಾವ ನೈತಿಕತೆ ಇದೆ?ಪತ್ರಕರ್ತರಿಗೆ ಹಣ ನೀಡಿದ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.ಲೋಕಾಯುಕ್ತ ತನಿಖೆಯಲ್ಲಿ ಸತ್ಯಾಂಶ ಹೊರಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಹೆಡ್ ಬುಷ್ ಚಿತ್ರದ ಪ್ರಚಾರ ಮಾಡ್ತಿದ್ದವರ ವಿರುದ್ಧ ಎಫ್ಐಆರ್