ಕೈ ನಾಯಕರ ಬಗ್ಗೆ ಅಸಮಧಾನ ಇಲ್ಲ ಎಂದ ಸಿಎಂ

Webdunia
ಶುಕ್ರವಾರ, 28 ಡಿಸೆಂಬರ್ 2018 (19:13 IST)
ಮೈತ್ರಿ ಸರಕಾದ ಸಚಿವ ಸಂಪುಟ ವಿಸ್ತರಣೆ, ನಿಗಮ ಮಂಡಳಿಗಳ ನೇಮಕ ಸೇರಿದಂತೆ ಇನ್ನಿತರ ವಿಷಯಗಳಲ್ಲಿ ಕೈ ಪಕ್ಷದ ನಾಯಕರ ಬಗ್ಗೆ  ಅಸಮಾಧಾನ ಎನ್ನೋದು ಇಲ್ಲ ಎಂದು ಸಿಎಂ ಹೇಳಿದ್ದಾರೆ.

11ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಲಾಂಛನ ಬಿಡುಗಡೆ ನಂತರ ಗೃಹ ಕಛೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನನ್ನು ನೋಡಿದರೆ ಅಸಮಾಧಾನಗೊಂಡವನಂತೆ ಕಾಣುತ್ತೇನೆಯೇ ಎಂದು ಮಾಧ್ಯಮದವರನ್ನೇ ಪ್ರಶ್ನಿಸಿದರು.

ಕಾಂಗ್ರೆಸ್ ನಾಯಕರ ಜತೆ ಯಾವುದೇ ಅಸಮಾಧಾನ, ಮುನಿಸಾಗಲಿ ಇಲ್ಲ. ಎಲ್ಲವನ್ನು ಚರ್ಚೆ ಮಾಡಿಯೇ ತೀರ್ಮಾನ ಮಾಡಿದ್ದೇವೆ. ಅದರಂತೆ ಸಂಪುಟ ವಿಸ್ತರಣೆಯಾಗಿದೆ. ನಿಗಮ ಮಂಡಳಿಗಳ ನೇಮಕದ ಬಗ್ಗೆಯೂ ಸದ್ಯದಲ್ಲೇ ಆದೇಶಗಳು ಹೊರಬೀಳಲಿವೆ ಎಂದರು.

ರಾಜ್ಯ ಕಾಂಗ್ರೆಸ್ ನಾಯಕರು ಕೆಲ ಶಾಸಕರನ್ನು ನಿಗಮ ಮಂಡಳಿ ಅಧ್ಯಕ್ಷರಾಗಿ ಮತ್ತು ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿಯಾಗಿ ನೇಮಕ ಮಾಡಿರುವ ಬಗ್ಗೆ ಮುಖ್ಯಮಂತ್ರಿ ಅಸಮಾಧಾನಗೊಂಡಿದ್ದಾರೆ ಎಂಬ ವರದಿಗಳನ್ನು ತಳ್ಳಿ ಹಾಕಿದ ಅವರು, ಯಾವುದೇ ಅಸಮಾಧಾನಗಳಿಲ್ಲ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ನಾಯಕನಿದ್ದರೆ ಸಮುದಾಯಕ್ಕೆ ಬಲ, ಸಿದ್ದು ಪರ ಪುತ್ರ ಯತೀಂದ್ರ ಅಬ್ಬರದ ಭಾಷಣ

ಗೋವಾದಲ್ಲಿ ವಿಶ್ವದ ಅತಿ ಎತ್ತರದ ರಾಮನ ಪ್ರತಿಮೆ ಅನಾವರಣಗೊಳಿಸಿದ ಮೋದಿ

ಶಕ್ತಿ, ಗೃಹಲಕ್ಷ್ಮಿ ಯೋಜನೆಯಿಂದ ತಲಾ ಆದಾಯದಲ್ಲಿ ದೇಶದಲ್ಲಿಯೇ ರಾಜ್ಯ ಮೊದಲು: ಸಿದ್ದರಾಮಯ್ಯ

ಸಿದ್ದರಾಮಯ್ಯ ಸಂಕಲ್ಪನೂ ಈಡೇರುತ್ತೆ, ಡಿಕೆಶಿ ಸಿಎಂ ಆಗುತ್ತಾರೆ: ಜನಾರ್ದನ ರೆಡ್ಡಿ

ಇದಕ್ಕೆಲ್ಲ ಖರ್ಗೆ, ರಾಹುಲ್ ಗಾಂಧಿ ಪರಿಹಾರ ಹುಡುಕುತ್ತಾರೆ: ಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments