Webdunia - Bharat's app for daily news and videos

Install App

ಉ.ಕ. ದಲ್ಲಿ ಆಸ್ಪತ್ರೆಗಾಗಿ ವಿದ್ಯಾರ್ಥಿಗಳಿಂದ ಅಭಿಯಾನಕ್ಕೆ ಸಿಎಂ ಸ್ಪಂದನೆ

Webdunia
ಭಾನುವಾರ, 9 ಜೂನ್ 2019 (11:09 IST)
ಬೆಂಗಳೂರು : ಉತ್ತರ ಕನ್ನಡ ಜಿಲ್ಲೆಗೆ ಸುಸಜ್ಜಿತ ಆಸ್ಪತ್ರೆ ಬೇಕು ಎಂಬ ಅಭಿಯಾನಕ್ಕೆ ಇದೀಗ ಸಿಎಂ ಕುಮಾರಸ್ವಾಮಿ ಸ್ಪಂದಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.




ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆಗಾಗಿ ವಿದ್ಯಾರ್ಥಿಗಳು ಸೋಶಿಯಲ್ ಮೀಡಿಯಾದಲ್ಲಿ ಅಭಿಯಾನ ಆರಂಭಿಸಿದ್ದು, ಆ ಮೂಲಕ ಆಸ್ಪತ್ರೆಗೆ ಬೇಡಿಕೆಯಿಟ್ಟು ಶಾಸಕ, ಸಂಸದ, ಪ್ರಧಾನಿಗೂ ಸಂದೇಶ ರವಾನೆ ಮಾಡಿದ್ದಾರೆ.


ಇದಕ್ಕೆ ಪ್ರತಿಕ್ರಿಯಿಸಿದ ಸಿಎಂಕುಮಾರಸ್ವಾಮಿ, ಉತ್ತರ ಕನ್ನಡ ಜಿಲ್ಲೆಗೆ ಒಂದು ಸುಸಜ್ಜಿತ ಆಸ್ಪತ್ರೆಯ ಅಗತ್ಯಕ್ಕಾಗಿ ಅಭಿಯಾನ ನಡೆಯುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳಿಂದ ವರದಿ ತರಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು,” ಎಂದು ಟ್ವೀಟ್ ಮೂಲಕ ಭರವಸೆ ನೀಡಿದ್ದಾರೆ.


ಹಾಗೇ ಸಿಎಂ ಈ ಅಭಿಯಾನಕ್ಕೆ ತಡವಾಗಿ ಪ್ರತಿಕ್ರಿಯೆ ನೀಡಿದ್ದಕ್ಕೆ ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದರೆ, ಇನ್ನೂ ಕೆಲವರು ಉತ್ತರ ಕನ್ನಡ ಜಿಲ್ಲೆಗೆ ಒಂದು ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಈ ಕೂಡಲೇ ಆಗಲಿ. ಯಾವುದೇ ಕಾರಣಕ್ಕೂ ಅದು ವಿಳಂಬವಾಗಬಾರದು ಎಂದು ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments