Publish Date: Sat, 05 Nov 2022 (09:50 IST)
Updated Date: Sat, 05 Nov 2022 (09:33 IST)
ಹುಬ್ಬಳ್ಳಿ : ಕಾಮಗಾರಿ ಬಿಲ್ ಆಗದ ಹಿನ್ನೆಲೆಯಲ್ಲಿ ಮಾನಸಿಕವಾಗಿ ನೊಂದ ಹುಬ್ಬಳ್ಳಿಯ ಗುತ್ತಿಗೆದಾರನೊಬ್ಬ ದಯಾಮರಣ ಕೋರಿ ರಾಷ್ಟ್ರಪತಿಗೆ ಅರ್ಜಿ ಬರೆದಿದ್ದಾರೆ.
ಗುತ್ತಿಗೆದಾರ ಎ.ಬಸವರಾಜ್ ಎಂಬಾತ ದಯಾಮರಣಕ್ಕಾಗಿ ರಾಷ್ಟ್ರಪತಿ, ಪ್ರಧಾನಮಂತ್ರಿ, ರಾಜ್ಯಪಾಲ ಮತ್ತು ಮುಖ್ಯಮಂತ್ರಿಗೆ ಅರ್ಜಿ ಸಲ್ಲಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ಮತ್ತು ಮೂಡಗೆರೆ ತಾಲೂಕಿನ ಗ್ರಾಮ ಪಂಚಾಯಿತಿಗಳಿಗೆ ಬಸವರಾಜ್ ಕೋವಿಡ್ ಪರಿಕರಗಳ ಸರಬರಾಜು ಮಾಡಿದ್ದರು.
ಅಲ್ಲದೆ ಕಡೂರು ಬಿಜೆಪಿ ಶಾಸಕ ಬೆಳ್ಳಿ ಪ್ರಕಾಶ ಹೆಸರಿನಲ್ಲಿ ಬಿಲ್ನ ಒಟ್ಟು 40 ಪರ್ಸೆಂಟೇಜ್ಗಿಂತ ಹೆಚ್ಚಿನ ಹಣಕ್ಕೆ ಕಡೂರು ಇಔ ದೇವರಾಜ್ ನಾಯಕ್ ಒತ್ತಾಯ ಮಾಡುತ್ತಿದ್ದಾರೆ.
ಪ್ರಧಾನ ಮಂತ್ರಿ ಕಾರ್ಯಾಲಯದಿಂದ 4 ಬಾರಿ, ಮುಖ್ಯಮಂತ್ರಿ ಅವರ ಕಾರ್ಯಾಲಯ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಹೆಚ್ಚುವರಿ ಮುಖ್ಯಾಧಿಕಾರಿ ನಿರ್ದೇಶನ ನೀಡಿದರೂ, ಬಿಲ್ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿದರು.