ಪೊಲೀಸರ ಸಮ್ಮುಖದಲ್ಲಿಯೇ ಬಿಜೆಪಿಯ ಕಾರ್ಯಕರ್ತರು ಸಾರ್ವಜನಿಕ ವಾಗಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಲ್ಲದೇ ಬೈಕ್ ಮೇಲೆ ಕಲ್ಲು ಎತ್ತಿ ಹಾಕಿ ಜಖಂಗೊಳಿಸಿದ ಹೇಯ ಘಟನೆ ವರದಿಯಾಗಿದೆ.
 
									
										
								
																	
	ಕಾಂಗ್ರೆಸ್ ಪಕ್ಷದ ಧ್ವಜವನ್ನು ಜಖಂಗೊಳಿಸಿ ಬೈಕ್ ಮೇಲೆ ಎಸೆದು ನಡು ರಸ್ತೆಯಲ್ಲಿ ಬೆಂಕಿ ಹಚ್ಚಿದ್ದಾರೆ. ಪೊಲೀಸರು ಸ್ಥಳದಲ್ಲಿಯೇ ಉಪಸ್ಥಿತರಿದ್ದರೂ ಕಂಡು ಕಾಣದಂತೆ ಮಾನವಾಗಿದ್ದರು ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದ್ದಾರೆ.
 
									
			
			 
 			
 
 			
			                     
							
							
			        							
								
																	
	 
	ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ವಾಲ್ಮೀಕಿ ವೃತ್ತದಲ್ಲಿ ಘಟನೆ ನಡೆದಿದ್ದು ಬಿಎಸ್.ಯಡಿಯೂರಪ್ಪ ರಾಜೀನಾಮೆ ನೀಡಿದ್ದರಿಂದ ರೊಚ್ಚಿಗೆದ್ದ ಬಿಜೆಪಿ ಕಾರ್ಯಕರ್ತರು ಮಾಡಿದ ದಾಂದಲೆ ವಿಡಿಯೋ ತಡವಾಗಿ ಬೆಳಕಿಗೆ ಬಂದಿದೆ. 
 
									
										
								
																	
	 
	ಶಾಂತಿಗೆ ಹೆಸರಾಗಿದ್ದ ಗಂಗಾವತಿ ನಗರದ ಜನರನ್ನು ಭಯ ಗೋಳಿಸಲು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಮಾಡಿದ ಬಿಜೆಪಿಯ  ಕಾರ್ಯಕರ್ತರ ಪುಂಡಾಟಕ್ಕೆ ಗಂಗಾವತಿ ಬಿಜೆಪಿ ಶಾಸಕ ಪರಣ್ಣ ಮುನವಳ್ಳಿ ಸಾಥ್ ನೀಡಿದ್ದಾರೆ ಎಂದು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.