Select Your Language

Notifications

webdunia
webdunia
webdunia
webdunia

ಅವಿಶ್ವಾಸ ಮಂಡನೆಗೆ ಕಾಂಗ್ರೆಸ್‌ನಲ್ಲೇ ಅಪಸ್ವರ

ಅವಿಶ್ವಾಸ ಮಂಡನೆಗೆ ಕಾಂಗ್ರೆಸ್‌ನಲ್ಲೇ ಅಪಸ್ವರ
ಬೆಂಗಳೂರು , ಬುಧವಾರ, 14 ಜೂನ್ 2017 (13:13 IST)
ವಿಧಾನಪರಿಷತ್ ಸಭಾಪತಿ ಡಿ.ಎಚ್.ಶಂಕರ್‌ಮೂರ್ತಿ ವಿರುದ್ಧದ ಅವಿಶ್ವಾಸ ನಿರ್ಣಯ ಮಂಡನೆಗೆ ಕಾಂಗ್ರೆಸ್ ಪಕ್ಷದಲ್ಲಿಯೇ ಅಪಸ್ವರ ಎದುರಾಗಿದೆ.
 
ಚೀಫ್ ವಿಪ್ ಕರೆದ ಸಭೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಎಸ್.ಆರ್.ಪಾಟೀಲ್ ಗೈರುಹಾಜರಾಗಿದ್ದಾರೆ. ಎಸ್‌.ಆರ್.ಪಾಟೀಲ್ ಗೈರುಹಾಜರಿಯನ್ನು ಪ್ರಶ್ನಿಸಿದ ಎಂ.ಡಿ.ಲಕ್ಷ್ಮಿನಾರಾಯಣ್, ಎಲ್ಲರು ಒಟ್ಟಾಗಿ ಸಭೆ ನಡೆಸುವಂತೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.
 
ನೂತನ ಸಭಾಪತಿ ಆಯ್ಕೆಯ ಬಗ್ಗೆ  ಸ್ಪಷ್ಟ ತೀರ್ಮಾನ ತೆಗೆದುಕೊಳ್ಳದಿರುವುದು ಪಾಟೀಲ್ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಮೂಲಗಳು ತಿಳಿಸಿವೆ.
 
ನಿನ್ನೆ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿ ಅವಿಶ್ವಾಸ ನಿರ್ಣಯಕ್ಕೆ ಬೆಂಬಲ ನೀಡುವಂತೆ ಮನವಿ ಮಾಡಿದ್ದರು ಎನ್ನಲಾಗಿದೆ. ಸಭಾಪತಿ ಸ್ಥಾನ ಜೆಡಿಎಸ್‌ಗೆ, ಉಪಸಭಾಪತಿ ಸ್ಥಾನ ಕಾಂಗ್ರೆಸ್ ಪಕ್ಷಕ್ಕೆ ಎನ್ನುವ ಒಪ್ಪಂದಕ್ಕೆ ಬರಲಾಗಿತ್ತು ಎಂದು ಮಾಧ್ಯಮಗಳು ವರದಿ ಮಾಡಿದ್ದವು.

 
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಪೊಲೀಸರಿಂದಲೇ ಠಾಣೆಯಲ್ಲಿ ಗುಂಡು ಪಾರ್ಟಿ: ಮಹಿಳಾ ಪೇದೆಗಳೇ ಸಪ್ಲೈಯರ್