Publish Date: Mon, 22 Apr 2019 (05:14 IST)
Updated Date: Mon, 22 Apr 2019 (05:15 IST)
ವಿಜಯಪುರ : ಗೃಹ ಸಚಿವ ಎಂಬಿ ಪಾಟೀಲ್ ಅವರು ಮಾಜಿ ಸಿಎಂ ಸಿದ್ದರಾಮಯ್ಯ ಬಳಿಕ ನಾನೇ ಸಿಎಂ ಎಂದು ಘೋಷಿಸಿಕೊಂಡಿದ್ದಾರೆ.
ಬಬಲೇಶ್ವರದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ನಾನು ಸಿಎಂ ಆಗ್ತೀನಿ. ನನಗೂ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ದುರಾಸೆ ಇಲ್ಲ. ಸಿದ್ದರಾಮಯ್ಯ ಬಳಿಕ ನಾನೇ ಸಿಎಂ ಎಂದು ಹೇಳಿದ್ದಾರೆ.
ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಅವರು ನಾನು ಮತ್ತೆ ಮುಖ್ಯಮಂತ್ರಿ ಆದರೆ 10 ಕೆಜಿ ಅಕ್ಕಿ ಕೊಡುವುದಾಗಿ ತಿಳಿಸಿದ್ದರು. ಅಲ್ಲದೇ ಮುಂದಿನ ಚುನಾವಣೆಯಲ್ಲಿ ಪಕ್ಷದಿಂದ ನಾನೇ ಸಿಎಂ ಅಭ್ಯರ್ಥಿ ಎಂದು ಹೇಳುವ ಶಕ್ತಿ ನನಗಿದೆ. ಈಶರಪ್ಪ ಅವರನ್ನು ಈ ರೀತಿ ಹೇಳುವಂತೆ ಕೇಳಿ ನೋಡೋಣ ಎಂದು ಬಿಜೆಪಿ ನಾಯಕ ಈಶ್ಚರಪ್ಪಗೆ ಟಾಂಗ್ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.