ಪಿಎಫ್ಐ ಸಂಘಟನೆ ಜೊತೆಗೆ ಕಾಂಗ್ರೆಸ್ ಯಾವತ್ತೂ ಹೊಂದಾಣಿಕೆ ಮಾಡಿಕೊಂಡಿಲ್ಲ. ಆದರೆ ಸವಣೂರು ಗ್ರಾಮ ಪಂಚಾಯತ್‌ನಲ್ಲಿ ಪಿಎಫ್ಐ ಜೊತೆಗೆ ಬಿಜೆಪಿ ಹೊಂದಾಣಿಕೆ ಮಾಡಿಕೊಂಡಿದೆ ಎಂದು  ಗೃಹ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
 
 			
 
 			
					
			        							
								
																	
	 
	ಹಿಂದೂ ಕಾರ್ಯಕರ್ತ ದೀಪಕ್ ರಾವ್ ಕೊಲೆಗೆ ಸಂಬಂಧಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಆಡಳಿತವಿರುವ ಕಡೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಹಿಂಸಾಚಾರ ನಡೆಯುತ್ತಿದೆ ಎಂದು ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ.
	 
	ಕಾಂಗ್ರೆಸ್ ಅವಧಿಯಲ್ಲಿ ಅಪರಾಧ ಪ್ರಕರಣಗಳು ಕಡಿಮೆಯಾಗಿವೆ. ಕಾಂಗ್ರೆಸ್ ಎಂದಿಗೂ ಪಿಎಫ್ಐ ಜೊತೆಗೆ ಹೊಂದಾಣಿಕೆ ಮಾಡಿಕೊಂಡಿಲ್ಲ. ಸಂಸದೆ ಶೋಭಾ ಕರಂದ್ಲಾಜೆ ಅವರ ಊರು ಬೆಳ್ತಂಗಡಿಯ ಸವಣೂರು ಗ್ರಾಮ ಪಂಚಾಯತ್‌ನಲ್ಲಿ ಕಾಂಗ್ರೆಸನ್ನು ಸೋಲಿಸುವ ಸಲುವಾಗಿ ಪಿಎಫ್ಐನೊಂದಿಗೆ ಬಿಜೆಪಿ ಹೊಂದಾಣಿಕೆ ಮಾಡಿಕೊಂಡಿದೆ ಎಂದಿದ್ದಾರೆ.
	 
	ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ 
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.