Select Your Language

Notifications

webdunia
webdunia
webdunia
webdunia

ಹೈಕೋರ್ಟ್ ತೀರ್ಪಿನಿಂದ ಕಾಂಗ್ರೆಸ್ ಪಕ್ಷಕ್ಕೆ ಛಡಿ ಏಟು ಬಿದ್ದಿದೆ: ಆರ್‌ ಅಶೋಕ್

ಹೈಕೋರ್ಟ್ ತೀರ್ಪಿನಿಂದ ಕಾಂಗ್ರೆಸ್ ಪಕ್ಷಕ್ಕೆ ಛಡಿ ಏಟು ಬಿದ್ದಿದೆ: ಆರ್‌ ಅಶೋಕ್

Sampriya

ಬೆಂಗಳೂರು , ಮಂಗಳವಾರ, 24 ಸೆಪ್ಟಂಬರ್ 2024 (18:05 IST)
ಬೆಂಗಳೂರು:  ಘನತೆವೆತ್ತ ರಾಜ್ಯಪಾಲರು ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಪ್ರಾಸಿಕ್ಯೂಷನ್ ಗೆ ನೀಡಿದ್ದ ಅನುಮತಿ ಕಾನೂನುಬದ್ಧವಾಗಿದೆ ಎಂದು ಮಾನ್ಯ ಹೈಕೋರ್ಟ್ ರಾಜ್ಯಪಾಲರ ನಿರ್ಧಾರವನ್ನ ಎತ್ತಿಹಿಡಿದಿದ್ದು, ಇದು ಸತ್ಯಕ್ಕೆ ಸಂದ ಜಯವಾಗಿದೆ ಎಂದು ವಿಪಕ್ಷ ನಾಯಕ ಆರ್‌ ಅಶೋಕ್ ಹೇಳಿದರು.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಅವರು ಪೋಸ್ಟ್ ಹಂಚಿಕೊಂಡಿದ್ದಾರೆ.

ಆರ್‌ ಅಶೋಕ್‌ ಪೋಸ್ಟ್‌ನಲ್ಲಿ ಹೀಗಿದೆ: ಘನತೆವೆತ್ತ ರಾಜ್ಯಪಾಲರು ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ
 ನವರ ವಿರುದ್ಧ ಪ್ರಾಸಿಕ್ಯೂಷನ್ ಗೆ ನೀಡಿದ್ದ ಅನುಮತಿ ಕಾನೂನುಬದ್ಧವಾಗಿದೆ ಎಂದು ಮಾನ್ಯ
ಹೈಕೋರ್ಟ್ ರಾಜ್ಯಪಾಲರ ನಿರ್ಧಾರವನ್ನ ಎತ್ತಿಹಿಡಿದಿದ್ದು, ಇದು ಸತ್ಯಕ್ಕೆ ಸಂದ ಜಯವಾಗಿದೆ.

ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದಾಗಿನಿಂದ ಮುಖ್ಯಮಂತ್ರಿ ಆದಿಯಾಗಿ, ಸಚಿವರು, ಶಾಸಕರು ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ಕಳೆದ ಅನೇಕ ದಿನಗಳಿಂದ ರಾಜ್ಯಪಾಲರನ್ನ, ರಾಜಭವನವನ್ನ ನಿಂದಿಸುತ್ತಾ ಬಂದಿದ್ದು, ಮಾನ್ಯ ಹೈಕೋರ್ಟ್ ನ ತೀರ್ಪು ಇಡೀ ಕಾಂಗ್ರೆಸ್ ಪಕ್ಷಕ್ಕೆ ಛಡಿ ಏಟು ಕೊಟ್ಟಿದೆ.

ಇನ್ನಾದರೂ ಅನಗತ್ಯವಾಗಿ ರಾಜ್ಯಪಾಲರನ್ನ ನಿಂದಿಸುವುದು ಬಿಟ್ಟು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೈತಿಕೆ ಹೊಣೆ ಹೊತ್ತು
ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸುತ್ತೇನೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ ಶುರು