Select Your Language

Notifications

webdunia
webdunia
webdunia
webdunia

ಮತಾಂತರಕ್ಕೆ ಕ್ರೈಸ್ತ ಧರ್ಮದ ಅವನತಿಯೇ ಕಾರಣ : ಸಂಸದ ಸಿಂಹ

ಮತಾಂತರಕ್ಕೆ ಕ್ರೈಸ್ತ ಧರ್ಮದ ಅವನತಿಯೇ ಕಾರಣ : ಸಂಸದ ಸಿಂಹ
bangalore , ಗುರುವಾರ, 30 ಡಿಸೆಂಬರ್ 2021 (20:12 IST)
ಯೂರೋಪಿಯನ್ ದೇಶಗಳಲ್ಲಿ ಕ್ರೈಸ್ತ ಧರ್ಮ ನೆಲ ಕಚ್ಚುತ್ತಿರುವುದಕ್ಕೆ ದೇಶದಲ್ಲಿ ಮತಾಂತರದ ಸದ್ದು ಹೆಚ್ಚಾಗುತ್ತಿದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು “ಯೂರೋಪಿಯನ್ ದೇಶಗಳಲ್ಲಿ ಚರ್ಚ್ ಗಳಿಗೆ ಯಾರು ಹೋಗುತ್ತಿಲ್ಲ.ಚರ್ಚ್ ಗಳು ಅಲ್ಲಿ ಮಾರಾಟಕ್ಕಿವೆ” ಎಂದು, ಮತಾಂತರ ಕಾಯ್ದೆ ಜಾರಿಗೆ ವಿರೋಧಿಸುತ್ತಿರುವ ಬಿಷಪ್ ಗಳು, ಫಾದರ್ ಗಳು ಸೇರಿ ಕಾಯ್ದೆ ವಿರೋಧಿಸುತ್ತಿರುವವರ ವಿರುದ್ದ ವಾಗ್ದಾಳಿ ನಡೆಸಿದರು.
”ಜನರನ್ನು ಮಂಗ್ಯಾ ಮಾಡಿ ಮತಾಂತರ ಮಾಡುವುದಕ್ಕೆ ಬ್ರೇಕ್ ಹಾಕಲಾಗಿದೆ.ಚಿಕಿತ್ಸೆ ಕೊಡಿಸಿ ರೋಗ ವಾಸಿ ಮಾಡಿಸುತ್ತಾರೆ. ನಂತರ ಏಸುವಿನ ಪ್ರಾರ್ಥನೆ ಮಾಡಿಸುತ್ತಾರೆ. ಏಸುವಿನಿಂದ ಗುಣ ಆಯ್ತು ಅಂತಾ ಮೋಸದಿಂದ ಮತಾಂತರ ಮಾಡ್ತಾರೆ. ನಿಮ್ಮ ಆಸ್ಪತ್ರೆಗಳನ್ನ ಬಂದ್ ಮಾಡಿ. ಬರೀ ಏಸುವಿನ ದೇವಾಲಯ ಕಟ್ಟಿಸಿ ನೋಡೋಣ” ಎಂದು ಸವಾಲು ಹಾಕಿದರು.
“ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕಾಯ್ದೆ ವಾಪಸ್” ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿ, ”ಇಂತಹ ಮನಸ್ಥಿತಿಯಿಂದಲೇ ಕಾಂಗ್ರೆಸ್ ಅಧಿಕಾರ ಕಳೆದುಕೊಂಡಿದೆ ಮುಂದೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ತಾಲಿಬಾನ್ ಮಾದರಿ ಸರ್ಕಾರ ಬರುತ್ತದೆ. ಇದು ಜನರಿಗೆ ಗೊತ್ತಿದೆ ಆದ್ದರಿಂದ 2023ರಲ್ಲೂ ಬಿಜೆಪಿಯೇ ಅಧಿಕಾರಕ್ಕೆ ಬರುತ್ತದೆ ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ಮೈಸೂರು ಮೃಗಾಲಯದಲ್ಲಿ ದತ್ತು ಸ್ವೀಕಾರ ದರ ಹೆಚ್ಚಳ