Webdunia - Bharat's app for daily news and videos

Install App

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಗೆ ಜೀವಾವಧಿ ಕಠಿಣ ಶಿಕ್ಷೆ, 1.50 ಲಕ್ಷ ದಂಡ

Webdunia
ಗುರುವಾರ, 20 ಡಿಸೆಂಬರ್ 2018 (18:34 IST)
ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅವಳ ಇಚ್ಛೆಗೆ ವಿರುದ್ಧವಾಗಿ ಲೈಂಗಿಕ ಅತ್ಯಾಚಾರವೆಸಗಿದ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಗಂವ್ಹಾರ ಗ್ರಾಮದ ನಿವಾಸಿಯಾಗಿರುವ ಆರೋಪಿ ಫಿರೋಜಖಾನ ತಂದೆ ಗುಡುಸಾಬ್ ನಾಟೀಕರ ಎಂಬಾತನನ್ನು ವಿವಿಧ ಕಲಂನಡಿ ಕಠಿಣ ಜೀವಾವಧಿ ಶಿಕ್ಷೆ ಹಾಗೂ 1.50 ಲಕ್ಷ ರೂ. ದಂಡ ವಿಧಿಸಿ ಕಲಬುರಗಿ 2ನೇ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಗೋಪಾಲಪ್ಪ ಎಸ್.  ತೀರ್ಪು ನೀಡಿದ್ದಾರೆ.

25 ವರ್ಷದ ಆರೋಪಿ ಫಿರೋಜಖಾನ ತಂದೆ ಗುಡುಸಾಬ್ ನಾಟೀಕರ 17 ವರ್ಷದ ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುತ್ತೇನೆ, ಮದುವೆಯಾಗುತ್ತೇನೆ ಎಂದು ಪುಸಲಾಯಿಸಿ ಅವಳ ಇಚ್ಛೆಗೆ ವಿರುದ್ಧವಾಗಿ ಲೈಂಗಿಕ ಅತ್ಯಾಚಾರವೆಸಗಿದ್ದ.  

ಆರೋಪಿ ಎಸಗಿರುವ ಅಪರಾಧ ರುಜುವಾತಾಗಿರುವ ಹಿನ್ನೆಲೆಯಲ್ಲಿ  ಐ.ಪಿ.ಸಿ. ಕಲಂ 420 ಅಡಿಯಲ್ಲಿನ ಅಪರಾಧಕ್ಕೆ 7 ವರ್ಷ ಕಠಿಣ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ಮತ್ತು ಐ.ಪಿ.ಸಿ. ಕಲಂ 376(2)(ಎನ್) ಹಾಗೂ ಪೋಕ್ಸೋ ಕಾಯ್ದೆ ಕಲಂ 6 ಅಡಿಯಲ್ಲಿನ ಅಪರಾಧಕ್ಕೆ ಕಠಿಣ ಜೀವಾವಧಿ ಶಿಕ್ಷೆ ಹಾಗೂ 1 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

Viral Video, ಬೆಂಗಳೂರು ಮಹಿಳೆಗೆ ಕಪಾಳಮೋಕ್ಷ ಮಾಡಿದ ರಾಪಿಡೋ ಚಾಲಕ: ಕಾರಣ ಇಲ್ಲಿದೆ

ದೆಹಲಿಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ಹಾಂಗ್‌ಕಾಂಗ್‌ನಲ್ಲಿ ಲ್ಯಾಂಡಿಂಗ್‌

ರಾಜ ರಘುವಂಶಿ ಹತ್ಯೆಯಾಗುವ ಮುನ್ನ ಪತ್ನಿ ಸೋನಂ ಜೊತೆಗಿದ್ದ ವಿಡಿಯೋ ವೈರಲ್

ಮುಂದಿನ ಸುದ್ದಿ