ತಲೆ ಮರೆಸಿಕೊಂಡಿರುವ ಮಾಜಿ ಸಚಿವ ಜನಾರ್ಧನ ರೆಡ್ಡಿ ತಮ್ಮ ವಿರುದ್ಧದ ಆಂಬಿಡೆಂಟ್ ಕಂಪೆನಿಯ ವಂಚನೆ ಪ್ರಕರಣ ರದ್ದುಗೊಳಿಸುವಂತೆ ನ್ಯಾಯಾಲಯದ ಮೊರೆ ಹೋಗಿದ್ದಾರೆ.
									
			
			 
 			
 
 			
					
			        							
								
																	ತಮ್ಮ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸುವಂತೆ ಹಾಗೂ ತನಿಖಾಧಿಕಾರಿಗಳನ್ನು ಬದಲಾಯಿಸುವಂತೆ ಕೋರಿ ರಾಜ್ಯ ಹೈಕೋರ್ಟ್ಗೆ ಮಾಜಿ ಸಚಿವ ಜನಾರ್ಧನ ರೆಡ್ಡಿ ಪರ ವಕೀಲರು ಅರ್ಜಿ ಸಲ್ಲಿಸಿದ್ದಾರೆ.
									
										
								
																	ಸಿಸಿಬಿ ತಂಡಗಳು ರೆಡ್ಡಿ ಬಂಧನಕ್ಕೆ ಬಲೆ ಬೀಸಿವೆ. ಏತನ್ಮಧ್ಯೆ, ರಾಜ್ಯ ಹೈಕೋರ್ಟ್‌ನಲ್ಲಿ ಈ ಪ್ರಕರಣದ ತನಿಖಾಧಿಕಾರಿಗಳಾದ ಸಿಸಿಬಿಯ ಡಿಸಿಪಿ ಗಿರೀಶ್ ಮತ್ತು ಎಸಿಪಿ ವೆಂಕಟೇಶಪ್ರಸನ್ನ ಅವರನ್ನು ಬದಲಾಯಿಸುವಂತೆ ಅರ್ಜಿ ಸಲ್ಲಿಸಿರುವ ಜನಾರ್ಧನರೆಡ್ಡಿ, ಈ ಪ್ರಕರಣದಲ್ಲಿ ತಮ್ಮ ವಿರುದ್ಧ ದಾಖಲಿಸಿರುವ ಮೊಕದ್ದಮೆಯನ್ನು ರದ್ದುಗೊಳಿಸುವಂತೆಯೂ ಮನವಿ ಮಾಡಿದ್ದಾರೆ.