ತಂದೆ ಇಲ್ಲದ ಮಗಳು ಅಂತ ತುಂಬಾ ಪ್ರೀತಿಯಿಂದ ಸಾಕಿದ್ದ ಮಗಳು ಹೆತ್ತ ತಾಯಿಯನ್ನೇ ಹತ್ಯೆ ಮಾಡುವ ಮಟ್ಟಕ್ಕೆ ಹೋಗಿದ್ದಾಳೆ ತಾಯಿ ಪ್ರೀತಿಗಾಗಿ ಎಷ್ಟೋ ಜನ ಹಂಬಲಿಸುತ್ತಾರೆ . ಆದರೆ ಇಲ್ಲಿ ಒಬ್ಬ ನೀಚ ಮಗಳು ತನ್ನ ಹೆತ್ತ ತಾಯಿಯನ್ನು ಕೊಂದು ಸೂಟ್ ಕೇಸ್ ನಲ್ಲಿ ಶವ ಪ್ಯಾಕ್ ಮಾಡಿ ನೇರವಾಗಿ ಪೊಲೀಸ್ ಠಾಣೆಗೆ ಬಂದಿದ್ದಾಳೆ. ಈ ಕೃತ್ಯ ಕಂಡು ಮೈಕೋ ಲೇಔಟ್ ಪೊಲೀಸ್ ಠಾಣೆ ಪೊಲೀಸರು ಬೆಚ್ಚಿಬಿದ್ದಿದ್ದಾರೆ.ಇನ್ನೂ ಈಕೆ ಗಂಡ ಹೆಬ್ಬಗೊಡಿಯ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡ್ಕೊಂಡಿದ್ದು.. ಪ್ರತಿನಿತ್ಯ ಮನೆಯಲ್ಲಿ ಅತ್ತೆ ಮತ್ತು ಅಮ್ಮನು ಒಂದಲ್ಲ ಒಂದು ವಿಚಾರಕ್ಕೆ ಜಗಳ ಆಗ್ತಾನೆ ಇರ್ತಿತ್ತು.ಮನೆಯಲ್ಲಿದ್ದ ಬೀಗರ ಜಗಳಕ್ಕೆ ಬೇಸತ್ತು ತಾಯಿ ಬೀವಾ ಪೌಲ್ ಮಗಳಿಗೆ ನಿದ್ದೆ ಮಾತ್ರೆ ನುಂಗಿ ಸಾಯೋದಾಗಿ ಹೇಳಿದ್ದಾಳೆ. ಮಗಳು ಅಮ್ಮನಿಗೆ ಇಂದು ಬೆಳ್ಳಗೆ 20 ಮಾತ್ರೆಗಳನ್ನ ನುಂಗಿಸಿದ್ದಾಳೆ.ನಂತರ ಸುಮಾರು11 ಗಂಟೆಗೆ ತಾಯಿ ಹೊಟ್ಟೆ ನೋವು ಅಂದಾಗ ಆಸ್ಪತ್ರೆಗೆ ಸೇರಿಸಬೇಕಾದ ಮಗಳು ವೇಲ್ ನಿಂದ ಕುತ್ತಿಗೆ ಬಿಗಿದು. ಟ್ರ್ಯಾಲಿ ಸೂಟ್ ಕೇಸ್ ನಲ್ಲಿ ತಾಯಿಯನ್ನ ಪ್ಯಾಕ್ ಮಾಡಿ ತಂದೆ ಫೋಟೋ ಜೊತೆಗೆಗಿಟ್ಟು ಸೀದಾ ಮೈಕೋ ಲೇಔಟ್ ಠಾಣೆಗೆ ಬಂದಿದ್ದಾಳೆ. ಮಗಳ ಕೃತ್ಯಕ್ಕೆ ಪೊಲೀಸ್ರು ಶಾಕ್ ಆಗಿದ್ದು ಕೇಸ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.