Select Your Language

Notifications

webdunia
webdunia
webdunia
webdunia

ತೊಗರಿ ಖರೀದಿ ಕೇಂದ್ರ ಆರಂಭಕ್ಕೆ ಆಗ್ರಹಿಸಿ ರೈತರಿಂದ ಪ್ರತಿಭಟನೆ

ತೊಗರಿ ಖರೀದಿ ಕೇಂದ್ರ ಆರಂಭಕ್ಕೆ ಆಗ್ರಹಿಸಿ ರೈತರಿಂದ ಪ್ರತಿಭಟನೆ
ಕಲಬುರಗಿ , ಶನಿವಾರ, 24 ನವೆಂಬರ್ 2018 (15:27 IST)
ಕಬ್ಬು ಬೆಳೆಗಾರರ ಪ್ರತಿಭಟನೆ ರಾಜ್ಯ ಗಮನ ಸೆಳೆಯುತ್ತಿದ್ದರೆ, ಇತ್ತ ಸದ್ದಿಲ್ಲದೆ ತೊಗರಿ ಬೆಳೆಗಾರರ ಹೋರಾಟದ ಕಾವು ಏರತೊಡಗಿದೆ.

ಬರಗಾಲ ಬರ ಪರಿಹಾರವನ್ನು ಕೂಡಲೇ ವಿತರಣೆ ಮಾಡಬೇಕು ಹಾಗೂ ಬರಗಾಲ ಕಾಮಗಾರಿ ಪ್ರಾರಂಭಿಸಬೇಕೆಂದು ಒತ್ತಾಯಿಸಿ ರೈತರು ಪ್ರತಿಭಟನೆ ನಡೆಸಿದ್ದಾರೆ.

ಕಲಬುರಗಿಯಲ್ಲಿ ತೊಗರಿ ಖರೀದಿ ಕೇಂದ್ರಗಳನ್ನು ಶೀಘ್ರವಾಗಿ ಪ್ರಾರಂಭ ಮಾಡಬೇಕೆಂದು ಒತ್ತಾಯಿಸಿ ರೈತರು ಪ್ರತಿಭಟನೆ ನಡೆಸಿದರು. ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ಕಲಬುರಗಿ ಜಿಲ್ಲಾಡಳಿತ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ರೈತರು, ಕೂಡಲೇ ತಮ್ಮ ಬೇಡಿಕೆಗೆ ಸ್ಪಂದಿಸುವಂತೆ ಜಿಲ್ಲಾಡಳಿತ ಹಾಗೂ ಸರಕಾರಕ್ಕೆ ಒತ್ತಾಯಿಸಿದರು.

ತೊಗರಿ ಕೇಂದ್ರಗಳನ್ನು ತೆರೆಯದ ಕಾರಣ ತೊಗರಿ ಬೆಳೆಗಾರರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ತೊಗರಿಗೆ ಬೆಂಬಲ ಬೆಲೆ ಘೋಷಣೆ ಮಾಡಬೇಕು ಹಾಗೂ ಖರೀದಿ ಕೇಂದ್ರಗಳನ್ನು ಆರಂಭಿಸಬೇಕೆಂದು ಪ್ರತಿಭಟನಾನಿರತ ರೈತರು ಆಗ್ರಹಿಸಿದರು.



Share this Story:

Follow Webdunia kannada

ಮುಂದಿನ ಸುದ್ದಿ

ಕ್ಯಾಸಿನೋ ಕ್ಲಬ್ ಮೇಲೆ ಸಿಸಿಬಿ ದಾಳಿ: ಬಂಧನವಾದವರು ಎಷ್ಟು ಗೊತ್ತಾ?