Webdunia - Bharat's app for daily news and videos

Install App

ಸರ್ಕಾರದಿಂದ ಶ್ರೀ ನಾರಾಯಣ ಗುರುಗಳ ಅಪಮಾನ ಖಂಡನೀಯ: ಬಿ ಕೆ ಹರಿಪ್ರಸಾದ್‌

Webdunia
ಭಾನುವಾರ, 16 ಜನವರಿ 2022 (21:14 IST)
ರಾಷ್ಟ್ರಕವಿ ರವೀಂದ್ರನಾಥ ಠ್ಯಾಗೂರ್, ಮಹಾತ್ಮಾಗಂಧಿ ಮತ್ತು ಭಾರತಕ್ಕೆ ಸಂವಿಧಾನ ನೀಡಿದ ಡಾಕ್ಟರ್ ಬಿ. ಆರ್. ಅಂಬೇಡ್ಕರ್ ಅವರನ್ನು ಗೌರವಿಸಿದ ಶ್ರೀ ನಾರಾಯಣ ಗುರು ಇಂದಿನ ಕೇಂದ್ರ ಸರ್ಕಾರ ಅಪಮಾನಿಸಿರುವುದು ಕಾಂಗ್ರೆಸ್ ಹಿರಿಯ ಸಂಘ ಹಾಗೂ ವಿಧಾನಪರಿಷತ್ ಸದಸ್ಯರಾದ ಬಿ ಕೆ ಹರಿಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. 
ಇಂದು ಬೆಂಗಳೂರಿನಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಮೆರವಣಿಗೆಯಲ್ಲಿ ದೇಶದ ಸಾಂಸ್ಕೃತಿಕ, ಧಾರ್ಮಿಕ ಐತಿಹಾಸಿಕ, ಅಭಿವೃದ್ದಿ ಮತ್ತು ಮಿಲಿಟರಿ ಸಾಮರ್ಥ್ಯವನ್ನು ಪ್ರತಿ ಬಿಂಬಿಸುವ ಸ್ತಬ್ದ ಚಿತ್ರಗಳ ಪ್ರದರ್ಶನವನ್ನ ಏರ್ಪಡಿಸಲಾಗುತ್ತದೆ. ಹಾಗೆಯೇ, ರಾಜ್ಯಗಳು ತಮ್ಮ ನೆಲದ ಹೆಮ್ಮೆಯನ್ನು ಪ್ರತಿಬಿಂಬಿಸುವ ಸ್ಥಬ್ದ ಚಿತ್ರಗಳನ್ನು ಕಳುಹಿಸುವ ಪರಿಪಾಠವಿದೆ.  
ಅದರಂತೆ, ಕೇರಳ ರಾಜ್ಯ ಕಳುಹಿಸಿದ್ದ ತನ್ನ ನೆಲದ ಹೆಮ್ಮೆಯನ್ನು ಪ್ರತಿಬಿಂಬಿಸುವ ಕ್ರಾಂತಿಕಾರಿ ಸಮಾಜ ಸುಧಾರಕ ಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರವನ್ನು ಕೇಂದ್ರ ಸರಕಾರ ತಿರಸ್ಕರಿಸಿದೆ. ಈ ಮೂಲಕ ಭಾರತದ ಚಾರಿತ್ರಿಕ, ಮಹತ್ವದ ಕ್ರಾಂತಿಕಾರಿ ಸಮಾಜ ಸುಧಾರಕನಿಗೆ ಅಪಮಾನಿಸಿದೆ. ಜೊತೆಗೆ ಶೋಷಣೆ, ಮಹಿಳಾ ಅಸಮಾನತೆ, ಜಾತಿ ಪ್ರತಿಪಾದನೆಯನ್ನು ಪರೋಕ್ಷವಾಗಿ ಕೇಂದ್ರ ಸರ್ಕಾರ ಉತ್ತೇಜಿಸಿದಂತಾಗಿದೆ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ.
ನಾರಾಯಣ ಗುರುಗಳು ಮೂಲತಃ ಕೇರಳ ರಾಜ್ಯದವರು ಎಂಬುದಕ್ಕೆ ಪರಿಪೂರ್ಣವಾದ ದಾಖಲೆ ಲಭ್ಯವಿದೆ. ಅಲ್ಲದೆ, ಶತಮಾನಗಳ ಹಿಂದಿನ ಅವರ ಸಮಾಜ ಸುಧಾರಣೆಯ ಬಗ್ಗೆ ನೂರಾರು ದಾಖಲೆಗಳು ಲಭ್ಯವಿವೆ. ಶೋಷಣೆ, ಜಾತೀಯತೆ, ಅಸಮಾನತೆ ನಿಮ್ನ ವರ್ಗದವರ ಅಪಮಾನಿಸುವುದರ ವಿರುದ್ದ ಸಿಡಿದು ನಿಂತು ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂದು ಸಾರಿದ್ದಲ್ಲದೆ ಸಮಾಜದಲ್ಲಿ ಸಮಾನತೆಗಾಗಿ ಬದುಕಿನುದ್ದಕ್ಕೂ ಶ್ರೀ ನಾರಾಯಣ ಗುರುಗಳು ಶ್ರಮಿಸಿದ್ದಾರೆ.
ನಾರಾಯಣ ಗುರುಗಳ ಕ್ರಾಂತಿಕಾರಿ ಸುಧಾರಣೆಯ ಮಾಹಿತಿ ತಿಳಿದಂತಹ ಮಹಾತ್ಮಾಗಾಂಧಿ ಅವರು ಕೇರಳದ ಶಿವಗಿರಿ ಮಠಕ್ಕೆ ಭೇಟಿ ನೀಡಿ ನಾರಾಯಣಗುರುಗಳ ವೈಕಂ ಹೋರಾಟವನ್ನು ಬೆಂಬಲಿಸಿ ಗೌರವಿಸಿದ್ದರು. ಭಾರತಕ್ಕೆ ರಾಷ್ಟ್ರಗೀತೆ ಯನ್ನು ನೀಡಿದ ರಾಷ್ಟ್ರಕವಿ ರವೀಂದ್ರನಾಥ ಠ್ಯಾಗೂರ್ ಮತ್ತು ಭಾರತಕ್ಕೆ ಸಂವಿಧಾನ ನೀಡಿದ ಡಾಕ್ಟರ್ ಬಿ. ಆರ್. ಅಂಬೇಡ್ಕರ್ ಅವರಿಂದ ಶ್ರೀ ನಾರಾಯಣ ಗುರುಗಳು ಗೌರವಿಸಲ್ಪಟ್ಟಿದ್ದಾರೆ. ಆದರೆ, ಇಂದಿನ ಸಂಘ ಪರಿವಾರದ ನಿಯಂತ್ರಣದಲ್ಲಿರುವ ಕೇಂದ್ರ ಸರಕಾರ ಅವರ ಸ್ತಬ್ದ ಚಿತ್ರವನ್ನು ತಿರಸ್ಕರಿಸುವ ಮೂಲಕ ಅವರನ್ನು ಅಪಮಾನಿಸಿರುವುದು ತೀವ್ರ ಖಂಡನೀಯ ಎಂದರು. 
ಇಂತಹ ಸಮ ಸಮಾಜದ ಹೋರಾಟಗಾರನಿಗೆ ಕೇಂದ್ರ ಬಿಜೆಪಿ ಸರ್ಕಾರ ರಚಿಸಿರುವ ಆಯ್ಕೆ ಸಮಿತಿ ಅಪಮಾನ ಮಾಡಿದೆ. ಈ ತಿರಸ್ಕಾರ ನಾರಾಯಣ ಗುರುಗಳಿಗೆ ದೇಶದ ಕೋಟ್ಯಂತರ ಶೋಷಿತ ಸಮಾಜಕ್ಕೆ ಅವಮಾನವಾಗಿದೆ ಎಂದು ಬಿ ಕೆ ಹರಿಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. 
ಈ ಕೇಂದ್ರ ಸರ್ಕಾರ ತಕ್ಷಣ ತನ್ನ ಪ್ರಮಾದ ಮತ್ತು ತಪ್ಪಿಗೆ ದೇಶದ ಜನತೆಯ ಕ್ಷಮೆ ಕೋರುವುದರ ಜೊತೆಗೆ ನಾರಾಯಣಗುರುಗಳ ಸ್ತಬ್ಧಚಿತ್ರವನ್ನು ಈ ಬಾರಿಯ ಗಣರಾಜ್ಯೋತ್ಸವ ಮೆರವಣಿಗೆಯಲ್ಲಿ ಸೇರಿಸಲು ಬಿ ಕೆ ಹರಿಪ್ರಸಾದ್ ಒತ್ತಾಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ ಮೇಲೆ ಅಮೆರಿಕಾ ಸುಂಕ ಹಾಕುತ್ತಿರುವುದಕ್ಕೆ ಅಸಲಿ ಕಾರಣ ಇಲ್ಲಿದೆ

ಧರ್ಮಸ್ಥಳದಲ್ಲಿ ಇಂದು ಎಸ್ಐಟಿ ಕಾರ್ಯಾಚರಣೆ ಹೇಗಿರಲಿದೆ

ಸರ್ಕಾರದ ವಿರುದ್ಧ ಕೆಎಸ್ಆರ್ ಟಿಸಿ, ಬಿಎಂಟಿಸಿ ಸಮರ: ಈ ದಿನದಿಂದ ರಸ್ತೆಗಿಳಿಯಲ್ಲ ಬಸ್

ರಾಹುಲ್ ಗಾಂಧಿ ಮತಕಳ್ಳತನದ ಪ್ರತಿಭಟನೆ ಯಾವಾಗ ಡಿಕೆ ಶಿವಕುಮಾರ್ ಹೇಳಿದ್ದೇನು

ಚುನಾವಣಾ ಆಯೋಗದ ಅನ್ಯಾಯದ ಬಗ್ಗೆ ಹೋರಾಡಬೇಕಿದೆ: ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments