Publish Date: Fri, 02 Dec 2022 (20:05 IST)
Updated Date: Fri, 02 Dec 2022 (20:10 IST)
ಅನಾರೋಗ್ಯ ಸಮಸ್ಯೆಯಾಗಿ ಮೈನರ್ ಶಸ್ತ್ರಚಿಕಿತ್ಸೆ ಅಗತ್ಯವಿದೆ ಎಂಬ ವೈದ್ಯರ ಅಭಿಪ್ರಾಯದ ಮೇರೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಎಎಲ್ ಏರ್ಪೋರ್ಟ್ ರಸ್ತೆಯಲ್ಲಿರುವ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ಸಿದ್ದರಾಮಯ್ಯ ಅವರ ಆರೋಗ್ಯ ಪರಿಶೀಲಿಸಿದ ವೈದ್ಯರು, ಶಸ್ತ್ರಚಿಕಿತ್ಸೆ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟು ವಿಶ್ರಾಂತಿಗೆ ಸಲಹೆ ನೀಡಿ ಮನೆಗೆ ಕಳಿಸಿದರು. ಇದಕ್ಕೂ ಮೊದಲು ಆಸ್ಪತ್ರೆಗೆ ದಾಖಲಾಗಿದ್ದ ಸಿದ್ದರಾಮಯ್ಯ ಅವರಿಗೆ ಸಣ್ಣ ಶಸ್ತ್ರಚಿಕಿತ್ಸೆ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದ್ದ ವೈದ್ಯರು ನಾಲ್ಕು ದಿನಗಳ ವಿಶ್ರಾಂತಿಗೆ ಸಲಹೆ ಮಾಡಿದ್ದರು.