Webdunia - Bharat's app for daily news and videos

Install App

ಉಪೇಂದ್ರ ಪಕ್ಷಕ್ಕೆ ಅಧಿಕೃತ ಚಿಹ್ನೆ ನೀಡಿದ ಚುನಾವಣಾ ಆಯೋಗ

Webdunia
ಶುಕ್ರವಾರ, 24 ಫೆಬ್ರವರಿ 2023 (08:18 IST)
ಕನ್ನಡದ ರಿಯಲ್ ಸ್ಟಾರ್ ಉಪೇಂದ್ರ ರಾಜಕಾರಣಕ್ಕೆ ಎಂಟ್ರಿ ಕೊಟ್ಟು ಹಲವು ವರ್ಷಗಳೇ ಕಳೆದಿವೆ. ಉತ್ತಮ ಪ್ರಜಾಕೀಯ ಪಾರ್ಟಿ ಹೆಸರಿನಲ್ಲಿ ಅವರು ಪಕ್ಷವೊಂದನ್ನು ಶುರು ಮಾಡುವ ಮೂಲಕ ರಾಜ್ಯಾದ್ಯಂತ ಪ್ರವಾಸ ಕೂಡ ಮಾಡಿದ್ದಾರೆ.

ಈ ಪಕ್ಷದಿಂದ ಈಗಾಗಲೇ ಪಂಚಾಯತಿ ಚುನಾವಣೆಯನ್ನು ಅವರು ಎದುರಿಸಿದ್ದರು. ಈ ಪಕ್ಷದಿಂದ ಪಂಚಾಯತಿ ಚುನಾವಣೆಯಲ್ಲಿ ಒಬ್ಬ ಸದಸ್ಯ ಕೂಡ ಗೆದ್ದಿದ್ದಾನೆ. ಆದರೆ, ಅಧಿಕೃತವಾಗಿ ಈ ಪಕ್ಷಕ್ಕೆ ಚಿಹ್ನೆ ಇರಲಿಲ್ಲ. ಇದೀಗ ಕೇಂದ್ರ ಚುನಾವಣೆ ಆಯೋಗ ಪಕ್ಷಕ್ಕೆ ಚಿಹ್ನೆ ನೀಡಿದೆ.

ಉಪೇಂದ್ರ ಅಧ್ಯಕ್ಷರಾಗಿರುವ ಉತ್ತಮ ಪ್ರಜಾಕೀಯ ಪಕ್ಷಕ್ಕೆ ‘ಆಟೋ’ವನ್ನು ಚಿಹ್ನೆಯನ್ನಾಗಿ ಕೇಂದ್ರ ಚುನಾವಣೆ ಆಯೋಗ ನೀಡಿದೆ. ಈ ಮೂಲಕ ಉತ್ತಮ ಪ್ರಜಾಕೀಯ ಪಕ್ಷಕ್ಕೆ ಅಧಿಕೃತ ಚಿಹ್ನೆ ದೊರೆತಿದೆ. ಹಲವು ವರ್ಷಗಳಿಂದ ತಮ್ಮದೇ ಆದ ಸಿದ್ಧಾಂತ ಮೂಲಕ ಉಪೇಂದ್ರ ತಮ್ಮ ಪಕ್ಷಕ್ಕೆ ಅಭ್ಯರ್ಥಿಗಳನ್ನು ಸೆಳೆಯುತ್ತಿದ್ದಾರೆ.

ಚುನಾವಣೆ ಎನ್ನುವುದು ಸುಲಭದ ತುತ್ತಲ್ಲ ಎಂದು ಉಪೇಂದ್ರಗೆ ಗೊತ್ತಿದ್ದರೂ, ವಿಭಿನ್ನ ಪ್ರಣಾಳಿಕೆಯ ಮೂಲಕ ಗಮನ ಸೆಳೆದಿದ್ದಾರೆ ಉಪೇಂದ್ರ. ಅವರ ಪ್ರಣಾಳಿಕೆಯ ಅಂಶಗಳು ಜನಪರವಾಗಿವೆ ನಿಜ. ಆದರೆ, ಅವುಗಳು ಜಾರಿಯಾಗುವುದು ತುಂಬಾ ಕಷ್ಟ. ಹಾಗಂತ ಉಪೇಂದ್ರ ಸುಮ್ಮನೆ ಕೂತಿಲ್ಲ. ಸಾಧ್ಯವಾದಷ್ಟು ಅವುಗಳನ್ನು ಜನರಿಗೆ ತಲುಪಿಸುವತ್ತ ನಾನಾ ರೀತಿಯಲ್ಲಿ ಕಸರತ್ತು ಮಾಡುತ್ತಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bannerghatta, ಸಫಾರಿ ವೇಳೆಯೇ ಪ್ರವಾಸಿಗನಿಗೆ ಹೃದಯಾಘಾತ

ಮನ್‌ ಕಿ ಬಾತ್‌ನಲ್ಲೂ ಎಸ್‌ ಎಲ್ ಬೈರಪ್ಪರ ಕೊಡುಗೆ ನೆನೆದ ಪ್ರಧಾನಿ ಮೋದಿ

ಧರ್ಮಸ್ಥಳದಲ್ಲಿ ನಡೆಯಿತು ಚಂಡಿಕಾಯಾಗ, ಸತ್ಯದರ್ಶನ: ಹಿಂದಿದೆ ಈ ಕಾರಣ

Karur Stampede: ಇದರ ಹೊಣೆಯನ್ನು ಡಿಎಂಕೆ, ವಿಜಯ್ ತಲೆಗೆ ಕಟ್ಟುತ್ತಿದೆ

Karur Stampede: ಮೃತರ ಕುಟುಂಬಕ್ಕೆ ದೊಡ್ಡ ಮೊತ್ತದ ಪರಿಹಾರ ಘೋಷಿಸಿದ ವಿಜಯ್

ಮುಂದಿನ ಸುದ್ದಿ
Show comments