Publish Date: Wed, 08 Dec 2021 (09:53 IST)
Updated Date: Wed, 08 Dec 2021 (09:55 IST)
ಬೆಂಗಳೂರು : ಕೊವಿಡ್ ಸೋಂಕಿನ ಅಂತ್ಯದ ದಿನಗಳು ಆರಂಭವಾಗಿದೆ. ಆದರೆ ನಿಖರವಾಗಿ ಸಮಯ ಹೇಳುವುದಕ್ಕೆ ಈಗ ಆಗಲ್ಲ.
ರಾಜ್ಯಕ್ಕೆ 3, 4ನೇ ಅಲೆ ಬಂದರೂ ದೊಡ್ಡ ಪರಿಣಾಮವಾಗಲ್ಲ. ಆದರೂ ನಾವು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕು ಎಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಕೊರೊನಾ ಸ್ಫೋಟಗೊಳ್ಳುತ್ತಿದೆ. ಶಾಲಾ-ಕಾಲೇಜಿನ ಮಕ್ಕಳಲ್ಲಿ ಸೋಂಕು ಹೆಚ್ಚಾಗಿ ಪತ್ತೆಯಾಗುತ್ತಿದೆ. ಹೀಗಾಗಿ ರಾಜ್ಯ ಸರ್ಕಾರ ಕೂಡ ಚರ್ಚೆ ನಡೆಸಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ.
ಸದ್ಯ ಬೆಂಗಳೂರಿನಲ್ಲಿ ಇಂದು ಮಾತನಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಕೊವಿಡ್ ಸೋಂಕಿನ ಅಂತ್ಯದ ದಿನಗಳು ಆರಂಭವಾಗಿದೆ ಎಂದು ತಿಳಿಸಿದ್ದಾರೆ. ಈಗಾಗಲೇ 7 ಕೋಟಿ 80 ಲಕ್ಷ ಡೋಸ್ ಲಸಿಕೆಯನ್ನು ನೀಡಲಾಗಿದೆ. ಲಸಿಕೆ ನೀಡಿಕೆಯಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿದೆ. ರಾಜ್ಯದ ಜನ ಕೂಡ ಲಸಿಕೆ ಪಡೆಯಲು ಮುಂದಾಗುತ್ತಿದ್ದಾರೆ.