Webdunia - Bharat's app for daily news and videos

Install App

ಚೊಂಬಿನ ಪೂರ್ತಿ ರಕ್ತ ತುಂಬಿದೆ: ಕಾಂಗ್ರೆಸ್ ನೀಡಿದ ಜಾಹೀರಾತಿಗೆ ಆರ್‌.ಅಶೋಕ್ ಕಿಡಿ

Sampriya
ಸೋಮವಾರ, 22 ಏಪ್ರಿಲ್ 2024 (17:58 IST)
ತುಮಕೂರು: ಲೋಕಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಜಾಹೀರಾತು ವಾರ್ ಜೋರಾಗಿದೆ.  ಇದೀಗ ಕಾಂಗ್ರೆಸ್ ನೀಡಿರುವ ಜಾಹೀರಾತಿನ ಚೊಂಬಿನಲ್ಲಿ ಹಿಂದೂಗಳ ರಕ್ತ ತುಂಬಿಕೊಂಡಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್‌ ಅಶೋಕ್ ಅವರು ಕಿಡಿಕಾರಿದರು.

ನಗರದಲ್ಲಿ ಸೋಮವಾರ ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಕೊಲೆ ಖಂಡಿಸಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲವಾಗಿದೆ. ರಾಜ್ಯದಲ್ಲಿ ತಾಲೀಬಾನ್ ಸರ್ಕಾರ ಆಡಳಿತ ನಡೆಸುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಜಾಹೀರಾತಿನ ಚೊಂಬಿನ ಪೂರ್ತಿ ರಕ್ತ ತುಂಬಿದೆ. ಚೊಂಬಿನಿಂದ ಹಿಂದೂಗಳ ರಕ್ತ ತುಂಬಿ ಚೆಲ್ಲುತ್ತಿರುವುದು ಅದರ ಪ್ರತೀಕವಾಗಿದೆ ಎಂದು ಕಾಂಗ್ರೆಸ್ ಟೀಕೆಗೆ ಪ್ರತಿಕ್ರಿಯಿಸಿದರು.

ಕಾಂಗ್ರೆಸ್ ಜಾಹೀರಾತು ಪ್ರತಿಯಾಗಿ 'ಕಾಂಗ್ರೆಸ್ ಬಂದ್ರೆ ಡೇಂಜರ್' ಎಂದು ಬಿಜೆಪಿಯಿಂದಲೂ ಜಾಹೀರಾತು ನೀಡಲಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲ ಕೊಲೆ, ಸುಲಿಗೆ ಹೆಚ್ಚಾಗಿವೆ. ಗೂಂಡಾ ರಾಜ್ಯ ಮಾಡಲು ಹೊರಟಿದೆ. ಮುಸ್ಲಿಂ ಭಯೋತ್ಪಾದಕರು ಏನು ಮಾಡಿದರೂ ರಕ್ಷಣೆ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ. ಜೈ ಶ್ರೀರಾಮ್ ಘೋಷಣೆ ಕೂಗುವುದು ಸಹ ಅಪರಾಧವಾಗಿದೆ ಎಂದು ಟೀಕಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments