ರಾಸಲೀಲೆ ಪ್ರಕರಣಕ್ಕೆ ಸಂಬಂಧಿದಂತೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಎಚ್.ವೈ.ಮೇಟಿ ಅವರನ್ನು ಹೈಕಮಾಂಡ್ ಸೂಚಿಸಿದರೆ ಪಕ್ಷದಿಂದ ಉಚ್ಚಾಟಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ತಿಳಿಸಿದರು.
ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್.ವೈ.ಮೇಟಿಯವರು ರಾಜೀನಾಮೆ ನೀಡಿದರು. ಆದರೂ ಅವರು ನಮ್ಮ ಪಕ್ಷದ ಶಾಸಕರಾಗಿದ್ದಾರೆ. ಪ್ರಕರಣದ ಸುದೀರ್ಘ ಮಾಹಿತಿಯನ್ನು ಹೈಕಮಾಂಡ್ ಗಮನಕ್ಕೆ ತಂದಿದ್ದೇನೆ ಎಂದರು.
ಹೈಕಮಾಂಡ್ ಸೂಚಿಸಿದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಚರ್ಚಿಸಿ ಎಚ್.ವೈ.ಮೇಟಿ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗುತ್ತದೆ ಎಂದು ಹೇಳಿದರು.
ಮೇಟಿ ಪ್ರಕರಣದಿಂದ ಪಕ್ಷಕ್ಕೆ ಮುಜುಗರ ತರುವಂತಾಗಿದೆ. ಆದರೆ, ಇಂತಹ ಪರಿಸ್ಥಿತಿಯನ್ನು ಸಹಿಸಿಕೊಳ್ಳಲಾಗುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಎಚ್.ವೈ.ಮೇಟಿ ರಾಸಲೀಲೆ ವಿಡಿಯೋ ಸಿಡಿಯನ್ನು ದೆಹಲಿಯಲ್ಲಿ ಆರ್‌ಟಿಐ ಕಾರ್ಯಕರ್ತ ರಾಜಶೇಖರ್ ಮುಲಾಲಿ ಅವರು ಬಿಡುಗಡೆಗೊಳಿಸಿದ್ದರು. ಸಚಿವರ ರಾಸಲೀಲೆ ಸಿಡಿ ಬಿಡುಗಡೆಯಾಗುತಿದ್ದಂತೆ ನೈತಿಕ ಹೊಣೆ ಹೊತ್ತು ಅಬಕಾರಿ ಸಚಿವ ಎಚ್.ವೈ.ಮೇಟಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ