Publish Date: Thu, 10 Nov 2022 (17:56 IST)
Updated Date: Thu, 10 Nov 2022 (17:58 IST)
ಸಾಲಬಾಧೆ ತಳ್ಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕು ಎಂ.ಗೊಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.ರವಿಕುಮಾರ್ (54) ಆತ್ಮಹತ್ಯೆಗೆ ಶರಣಾದ ರೈತನಾಗಿದ್ದು,ಗ್ರಾಮೀಣ ಬ್ಯಾಂಕ್ ನಲ್ಲಿ ಐದು ಲಕ್ಷ, ಹಾಗೂ ಕೈಸಾಲ ಇದ್ದ ಕಾರಣ ಆತ್ಮಹತ್ಯೆಗೆ ಶರಣಾಗಿದ್ದಾನೆ.ಈ ಪ್ರಕರಣ ನಂಗಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ.