Select Your Language

Notifications

webdunia
webdunia
webdunia
webdunia

ಮಗಳನ್ನೇ ಅತ್ಯಾಚಾರಗೈದ ತಂದೆಗೆ ಜೀವಾವಧಿ ಶಿಕ್ಷೆ!

ಮಗಳನ್ನೇ ಅತ್ಯಾಚಾರಗೈದ ತಂದೆಗೆ ಜೀವಾವಧಿ ಶಿಕ್ಷೆ!
ತುಮಕೂರು , ಭಾನುವಾರ, 5 ಮಾರ್ಚ್ 2023 (13:20 IST)
ತುಮಕೂರು : ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಅತ್ಯಾಚಾರ ಎಸಗಿದ್ದ ತಂದೆಗೆ ಜೀವಾವಧಿ ಶಿಕ್ಷೆ ವಿಧಿಸಿ ತುಮಕೂರಿನ ವಿಶೇಷ ಮಕ್ಕಳ ಸ್ನೇಹಿ ನ್ಯಾಯಾಲಯ ಆದೇಶಿಸಿದೆ.

ಶಿರಾ ತಾಲೂಕಿನ ಕಸಬಾ ಹೋಬಳಿ, ಮುದಿಗೆರೆ ಗ್ರಾಮದಲ್ಲಿ, ತಂದೆ ಬಸವರಾಜು ಮಲಗಿದ್ದ ತನ್ನ ಅಪ್ರಾಪ್ತ ವಯಸ್ಸಿನ ಮಗಳನ್ನ ಎಬ್ಬಿಸಿ, ಬೆದರಿಸಿ ಅತ್ಯಾಚಾರ ಎಸಗಿದ್ದ. ಈ ಬಗ್ಗೆ ಯಾರಿಗಾದರೂ ತಿಳಿಸಿದ್ರೆ ಸಾಯಿಸುವುದಾಗಿ ಪ್ರಾಣ ಬೆದರಿಕೆ ಹಾಕಿದ್ದ.

ತಂದೆಯ ದುಷ್ಕೃತ್ಯವನ್ನು ಬಾಲಕಿ ತನ್ನ ಚಿಕ್ಕಮ್ಮನಿಗೆ ತಿಳಿಸಿದ್ದಳು. ಇದರಿಂದ ಎಚ್ಚೆತ್ತುಕೊಂಡ ಸಂತ್ರಸ್ತೆ ಚಿಕ್ಕಮ್ಮ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ರಕ್ಷಣಾಧಿಕಾರಿಗಳಿಗೆ ಮಾಹಿತಿ ನೀಡಿದ್ದರು.

ಬಳಿಕ ಅಧಿಕಾರಿಗಳು ಬಸವರಾಜು ವಿರುದ್ಧ ಶಿರಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅದರನ್ವಯ ಆರೋಪಿ ವಿರುದ್ಧ ಕಲಂ 04, ಪೋಕ್ಸೋ ಕಾಯ್ದೆ, ಐಪಿಸಿ 504, 506ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು.

ಪ್ರಕರಣ ಸಂಬಂಧ ತನಿಖೆ ನಡೆಸಿದ ಶಿರಾ ಪೊಲೀಸ್ ಇನ್ಸ್ಪೆಕ್ಟರ್ ಪಿ.ಬಿ ಹನುಮಂತಪ್ಪ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಬೀದಿ ಹೆಣ್ಣುನಾಯಿಯ ಮೇಲೆ ಅತ್ಯಾಚಾರ!