Select Your Language

Notifications

webdunia
webdunia
webdunia
Monday, 14 April 2025
webdunia

ಎರಡು ಗುಂಪುಗಳ ನಡುವೆ ಶುರುವಾದ ಜಗಳ ಚಿನ್ಮಯಾನಂದ ಸ್ವಾಮೀಜಿ ಹತ್ಯೆಯಲ್ಲಿ ಅಂತ್ಯ

Chinmayananda Swamiji No More

Sampriya

ಕೋಲಾರ , ಶನಿವಾರ, 22 ಜೂನ್ 2024 (18:17 IST)
Photo Courtesy X
ಕೋಲಾರ: ಆನಂದ ಮಾರ್ಗ ಆಶ್ರಮದಲ್ಲಿ ಎರಡು ಗುಂಪುಗಳ ಮಧ್ಯೆ ನಡೆದ ಗಲಾಟೆ ಸ್ವಾಮೀಜಿಯೊಬ್ಬರ ಒಬ್ಬರ ಬರ್ಬರ ಹತ್ಯೆಯಲ್ಲಿ ಅಂತ್ಯವಾದ ಘಟನೆ ಇಂದು ಬೆಳಕಿಗೆ ಬಂದಿದೆ.

ಜಿಲ್ಲೆಯ ಮಾಲೂರು ತಾಲೂಕಿನ ಸಂತಳ್ಳಿಯಲ್ಲಿರುವ ಆನಂದ ಮಾರ್ಗ ಆಶ್ರಮದಲ್ಲಿ ಈ ದುರ್ಘಟನೆ ನಡೆದಿದೆ. ಹತ್ಯೆಯಾದ ಸ್ವಾಮಿಜೀಯನ್ನು ಆಚಾರ್ಯ ಚಿನ್ಮಯಾನಂದ ಎಂದು ಗುರುತಿಸಲಾಗಿದೆ. ಆಚಾರ್ಯ ಧರ್ಮ ಪ್ರಾಣಾನಂದ ಅವರ ಗುಂಪಿನಿಂದ ಹತ್ಯೆ ನಡೆದಿದೆ. ಈ ಕುರಿತು ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಸಂತಳ್ಳಿ ಗ್ರಾಮದ ನಾಲ್ಕು ಎಕರೆ ಜಾಗದಲ್ಲಿ ಆಶ್ರಮ ಇದ್ದು ಹಲವು ವರ್ಷಗಳಿಂದ ಜಾಗದ ಕುರಿತಂತೆ ವಿವಾದ ನಡೆಯುತ್ತಿದೆ. ಇಂದು ಬೆಳಿಗ್ಗೆ ಕೋರ್ಟ್​ಗೆ ದಾಖಲೆ ಸಹಿತ ಹೋಗುವ ವೇಳೆ ಮಾರಣಾಂತಿಕ ಹಲ್ಲೆ ನಡೆದಿದೆ ಎನ್ನಲಾಗಿದೆ. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿದ್ದ  ಚಿನ್ಮಯಾನಂದ ಅವರನ್ನು ಆರ್.ಎಲ್ ಜಾಲಪ್ಪ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸ್ವಾಮೀಜಿ ಕೊನೆಯುಸಿರೆಳೆದಿದ್ದಾರೆ.

ಕೊಲೆ ಪ್ರಕರಣ ಸಂಬಂಧ ಆಚಾರ್ಯ ಧರ್ಮ ಪ್ರಾಣಾನಂದ ಹಾಗೂ ಅರುಣ್ ಎಂಬುವವರನ್ನು ಮಾಲೂರು ಪೊಲೀಸ್​ ಅಧಿಕಾರಿಗಳು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಾಹಿತಿ ಕಮಲಾ ಹಂಪನಾ ಅವರ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ