Publish Date: Sun, 07 Jan 2018 (20:12 IST)
Updated Date: Sun, 07 Jan 2018 (20:13 IST)
ಮುಂಬರುವ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಗೆ ಇದೇ ತಿಂಗಳ ಅಂತ್ಯದಲ್ಲಿ ಅಂತಿಮ ಸ್ವರೂಪ ನೀಡಲಾಗುವುದು ಎಂದು ಕೆಪಿಸಿಸಿ ಚುನಾವಣಾ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಎಂ.ವೀರಪ್ಪ ಮೊಯ್ಲಿ ಹೇಳಿದ್ದಾರೆ.
ಕೆಪಿಸಿಸಿ ಚುನಾವಣಾ ಪ್ರಣಾಳಿಕೆ ಸಮಿತಿಯ ಕಲಬುರಗಿ ವಿಭಾಗ ಮಟ್ಟದ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ನೀತಿ ಏನಾಗಿರಬೇಕು, ಮುಂದೆ ಅಭಿವೃದ್ಧಿ ಪಥದ ಮೈಲುಗಲ್ಲು ಏನಾಗಿರಬೇಕು ಎನ್ನುವ ಬಗ್ಗೆ ಮುಖಂಡರ ಹಾಗೂ ಕಾರ್ಯಕರ್ತರ ಅಭಿಪ್ರಾಯ ಪಡೆಯಲಾಗುತ್ತಿದೆ. ರಾಜ್ಯದ ಐದು ಕಡೆ ಈಗಾಗಲೇ ವಿಭಾಗ ಮಟ್ಟದ ಸಭೆ ನಡೆಸಲಾಗಿದ್ದು, 6ನೇ ವಿಭಾಗ ಮಟ್ಟದ ಸಭೆ ಚಿತ್ರದುರ್ಗದಲ್ಲಿ ನಡೆಯಲಿದೆ ಎಂದು ತಿಳಿಸಿದ್ದಾರೆ.
ಕಳೆದ 2013ರ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳಲ್ಲಿ ಶೇಕಡಾ 98 ರಷ್ಟು ಅನುಷ್ಠಾನಗೊಳಿಸಲಾಗಿದೆ. ಪ್ರಣಾಳಿಕೆಯನ್ನು ಮುಖ್ಯಮಂತ್ರಿ, ಪಕ್ಷದ ಅಧ್ಯಕ್ಷರು ಮತ್ತು ಪಕ್ಷದ ಪ್ರಮುಖಕರ ಮುಂದಿಟ್ಟು ಅದಕ್ಕೆ ಅಂತಿಮ ಸ್ವರೂಪ ನೀಡಲಾಗುವುದು ಎಂದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.