Daily Horoscope

Select Your Language

Notifications

webdunia
webdunia
webdunia
webdunia

ಕೊರೊನಾಗೆ ಮೊದಲ ಸಾವು ಕಂಡ ಜಿಲ್ಲೆಯಲ್ಲಿ ಮಾ.31ರವರೆಗೆ ನಿಷೇಧಾಜ್ಞೆ

ಕೊರೊನಾ ವೈರಸ್
ಕೊರೊನಾ ವೈರಸ್ ನಿಂದಾಗಿ ದೇಶದಲ್ಲಿ ಮೊದಲ ಸಾವು ಕಂಡಿರುವ ಕಲಬುರಗಿ ಜಿಲ್ಲೆಯಲ್ಲಿ ನಿಷೇಧಾಜ್ಞೆಯನ್ನು ಮತ್ತೆ ಎರಡನೇ ಸಲ ವಿಸ್ತರಣೆ ಮಾಡಲಾಗಿದೆ.

ಕೊರೋನಾ ವೈರಸ್ ತಡೆಗಟ್ಟುವ ಮತ್ತು ಜನಸಂದಣಿ ನಿಯಂತ್ರಣದಲ್ಲಿಡಲು ಈಗಾಗಲೆ ಕಲಬುರಗಿ ಜಿಲ್ಲೆಯಾದ್ಯಂತ ಜಾರಿಯಲ್ಲಿರುವ ಸಿ.ಆರ್.ಪಿ.ಸಿ. ಕಾಯ್ದೆ-1973ರ ಕಲಂ 144 ನಿಷೇಧಾಜ್ಞೆಯನ್ನು ಮಾರ್ಚ್ 31ರ ರಾತ್ರಿ 8 ಗಂಟೆ ವರೆಗೆ ವಿಸ್ತರಿಸಿ ಕಲಬುರಗಿ ಜಿಲ್ಲಾಧಿಕಾರಿ ಶರತ್ ಬಿ. ಆದೇಶ ಹೊರಡಿಸಿದ್ದಾರೆ.

ಕೊರೋನಾ ಸೊಂಕಿನಿಂದ ಜಿಲ್ಲೆಯಲ್ಲಿ ಓರ್ವ ವ್ಯಕ್ತಿ ಮೃತಪಟ್ಟ ಹಿನ್ನೆಲೆಯಲ್ಲಿ ಸಾರ್ವಜನಿಕರ ಆರೋಗ್ಯ ಹಿತದೃಷ್ಠಿಯಿಂದ  ಕಲಬುರಗಿ ಜಿಲ್ಲೆಯಾದ್ಯಂತ ಮಾರ್ಚ್ 31ರ ವರೆಗೆ  ನಿಷೇಧಾಜ್ಞೆಯನ್ನು ವಿಸ್ತರಿಸಿದ್ದಾರೆ.

ನಿಷೇಧಾಜ್ಞೆಯ ಈ ಸಂದರ್ಭದಲ್ಲಿ ಸಾಮೂಹಿಕವಾಗಿ ಧಾರ್ಮಿಕ ಮತ್ತು ವೈಯಕ್ತಿಕ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ. ಗುಂಪು-ಗುಂಪಾಗಿ ಚಲಿಸುವುದು ಮತ್ತು ಅನಾವಶ್ಯಕವಾಗಿ ಸಂಚರಿಸುವಂತಿಲ್ಲ ಮತ್ತು ಈ ಆದೇಶದಿಂದ ಭಯಪಟ್ಟು ಅಗತ್ಯಕ್ಕಿಂತ ಹೆಚ್ಚು ಅವಶ್ಯ ದಾಸ್ತಾನುಗಳನ್ನು ಸಹ ಖರೀದಿಸುವ ಅಗತ್ಯವಿಲ್ಲ ಎಂದು ಅವರು ಆದೇಶದಲ್ಲಿ ತಿಳಿಸಿದ್ದು, ಅಗತ್ಯ ಸೇವೆಗಳಿಗೆ ಈ ಆದೇಶ ಅನ್ವಯವಾಗುವುದಿಲ್ಲ ಎಂದು ಡಿ.ಸಿ. ಶರತ್ ಬಿ. ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.




Share this Story:

Follow Webdunia kannada

ಮುಂದಿನ ಸುದ್ದಿ

ಕೊರೊನಾ ಶಂಕೆ : 5 ವರದಿಗಳೂ ನೆಗಟಿವ್ ; ನಿಟ್ಟುಸಿರು ಬಿಟ್ಟ ಜನತೆ