Publish Date: Tue, 09 Jul 2019 (17:15 IST)
Updated Date: Tue, 09 Jul 2019 (17:16 IST)
ಅಪ್ರಾಪ್ತೆಯೊಬ್ಬಳ ಮೇಲೆ ಅತ್ಯಾಚಾರ ನಡೆಸಿ ಆಕೆಯನ್ನು ಐದು ಜನರು ಗರ್ಭಿಣಿ ಮಾಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಮಂಗಳೂರಿನ ವಿಟ್ಲ ನಿವಾಸಿಯಾಗಿರುವ 17 ವರ್ಷದ ಬಾಲಕಿ ಎಸ್ ಎಸ್ ಎಲ್ ಸಿ ಮುಗಿಸಿದ ನಂತರ ಮನೆಯಲ್ಲಿಯೇ ಇರುತ್ತಿದ್ದಳು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸಿಬ್ಬಂದಿ ಸೇರಿದಂತೆ ಐವರು ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಕಾಮುಕರು ನಿರಂತರ ಅತ್ಯಾಚಾರ ನಡೆಸಿದ್ದರಿಂದಾಗಿ ಬಾಲಕಿ ಗರ್ಭಿಣಿಯಾಗಿದ್ದಾಳೆ.
ಆರೋಪಿಗಳ ವಿರುದ್ಧ ಪೊಲೀಸರು ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಬಾಲಕಿ ಮನೆಗೆ ಆಶಾ ಕಾರ್ಯಕರ್ತೆ ಆಗಮಿಸಿ ಪರೀಕ್ಷಿಸಿದಾಗ ಬಾಲಕಿ ಗರ್ಭಿಣಿಯಾಗಿದ್ದು ಕಂಡು ಬಂದಿದೆ.